ಡೆಹ್ರಾಡೂನ್: ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಹಾಗೂ ಸಂಸದ ರಾಹುಲ್ ಗಾಂಧಿ ಅವರನ್ನು ಅವಹೇಳನ ಮಾಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಉತ್ತರಾಖಂಡದ ನ್ಯಾಯಾಲಯವೊಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ನವೆಂಬರ್ 18ರಂದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಕಾಂಗ್ರೆಸ್ ಪಕ್ಷದ ಅಭಿಮಾನಿ ಡಾ.ಗಣೇಶ್ ಉಪಾಧ್ಯಾಯ ಅವರು ಉಧಮಸಿಂಗ್ ನಗರ ಜಿಲ್ಲಾ ನ್ಯಾಯಾಲಯ, ರುದ್ರಾಪುರ ಸೆಷನ್ಸ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಹಿಂತಾ ಬಿಸ್ವಾ ಶರ್ಮಾ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
2022ರಲ್ಲಿ ನಡೆಯಲಿರುವ ಉತ್ತರಾಖಂಡ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಕಿಚ್ಚಾ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಡಾ.ಗಣೇಶ್ ಉಪಾಧ್ಯಾಯ ಅವರು ಕಾಂಗ್ರೆಸ್ ಪಕ್ಷದ ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಅನುಚಿತ ಕಾಮೆಂಟ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ನೆಹರು ಮತ್ತು ಗಾಂಧಿ ಕುಟುಂಬದ ಮೂರು ತಲೆಮಾರುಗಳು ಸ್ವಾತಂತ್ರ್ಯ ಚಳವಳಿಯಿಂದ ರಾಷ್ಟ್ರದ ಅಭಿವೃದ್ಧಿಯವರೆಗೆ ದೇಶಕ್ಕಾಗಿ ತಮ್ಮ ರಕ್ತವನ್ನು ಹರಿಸಿದ್ದಾರೆ ಎಂದು ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ಹಿಮಂತ ಅವರು ತಮ್ಮ ದ್ವೇಷದ ಭಾಷಣದಲ್ಲಿ ರಾಹುಲ್ ಗಾಂಧಿಯನ್ನು ಉದ್ದೇಶಿಸಿ “ನಿಮ್ಮ ತಂದೆ ಯಾರು ಎಂದು ನಾವು ಸಾಕ್ಷ್ಯ ಕೇಳಿದ್ದೇವೆಯೇ? ಎಂದು ಕೇಳಿದ್ದಾರೆ” ಎಂದು ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ಹಿಮಂತ ಅವರು ತಮ್ಮ ಸಾರ್ವಜನಿಕ ಭಾಷಣದಲ್ಲಿ ರಾಹುಲ್ ಗಾಂಧಿ ಹಾಗೂ ಅವರ ತಾಯಿ ಸಂಸದೆ ಸೋನಿಯಾ ಗಾಂಧಿ ಅವರ ವ್ಯಕ್ತಿತ್ವವನ್ನು ಅವಮಾನಿಸಿದ್ದಾರೆ ಎಂದು ಅರ್ಜಿದಾರರು ಹೇಳಿದ್ದಾರೆ.
ಹಿಮಂತ ಬಿಸ್ವಾ ಶರ್ಮಾ ಅವರನ್ನು ಅಕ್ಟೋಬರ್ 17, 2023ರಂದು ಹಾಜರಾಗುವಂತೆ ನ್ಯಾಯಾಲಯ ಆದೇಶಿಸಿದ್ದರೂ, ದೆಹಲಿಯ ವಕೀಲರ ಗುಂಪಿನ ಮನವಿಯ ಮೇರೆಗೆ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ನವೆಂಬರ್ 18ಕ್ಕೆ ಮುಂದೂಡಿದೆ. ನವೆಂಬರ್ 18ರಂದು ಹಿಮಂತ ನ್ಯಾಯಾಲಯಕ್ಕೆ ಹಾಜರಾಗುವುದಾಗಿ ವಕೀಲರು ನ್ಯಾಯಾಲಯಕ್ಕೆ ಭರವಸೆ ನೀಡಿದರು.