Saturday, June 15, 2024

ಸತ್ಯ | ನ್ಯಾಯ |ಧರ್ಮ

ಬಜರಂಗದಳದ ರೌಡಿಶೀಟರ್ ಸಕಲೇಶಪುರ ರಘು ಬಂಧನಕ್ಕೆ ಸಿಪಿಐಎಂ ಹಾಗೂ ಎಸ್ಡಿಪಿಐ ಆಗ್ರಹ

‘ಮುಸ್ಲಿಂ ವ್ಯಾಪಾರಿಗಳು ಬಂದರೆ ಗುಂಡಿಟ್ಟು ಸಾಯಿಸಿ’ ಎನ್ನುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗಲು ಕಾರಣನಾದ ಬಜರಂಗದಳದ ಮಾಜಿ ರಾಜ್ಯ ಸಂಚಾಲಕ, ರೌಡಿಶೀಟರ್ ಸಕಲೇಶಪುರ ರಘು ಬಂಧನಕ್ಕೆ ರಾಜ್ಯಾದ್ಯಂತ ಹಲವು ಜನಪರ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ಸರ್ಕಾರವನ್ನು ಆಗ್ರಹಿಸಿವೆ.

ಈ ಹಿಂದೆಯೂ ಕೂಡಾ ಹಲವು ಬಾರಿ ಹಿಂದುತ್ವದ ಸಂಘಟನೆಗಳ ಹೆಸರಿನಲ್ಲಿ ಈ ವ್ಯಕ್ತಿ ಸಮಾಜದಲ್ಲಿ ಶಾಂತಿ ಕೆಡಿಸಲು ಪ್ರಯತ್ನಿಸಿದ್ದು, ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈತನ ಆಟಾಟೋಪಕ್ಕೆ ಲಂಗು ಲಗಾಮು ಇಲ್ಲದಂತಾಗಿತ್ತು. ಆದರೆ ಇದನ್ನೇ ಮುಂದುವರೆಸಿಕೊಂಡು ಬಂದ ಸಕಲೇಶಪುರ ರಘುಗೆ ಈಗ ಬಂಧನದ ಭೀತಿ ಎದುರಾಗಿದೆ. ನಿನ್ನೆಯ ದಿನ ತಡರಾತ್ರಿ ಪೊಲೀಸರು ಬಂಧಿಸಲು ಹೋದಾಗ ಸುಳಿವು ಅರಿತು ಅಜ್ಞಾತ ಸ್ಥಳಕ್ಕೆ ಈತ ಪರಾರಿಯಾಗಿದ್ದಾನೆ. ಸಧ್ಯ ಈತನ ಸಮಾಜಘಾತುಕ ಚಟುವಟಿಕೆಗಳ ಬಗ್ಗೆ ಪ್ರಸ್ತಾಪಿಸಿ ಸಿಪಿಎಂ ಹಾಸನ ಜಿಲ್ಲಾ ಘಟಕ ರಘು ಬಂಧನಕ್ಕೆ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದೆ.

“ಮುಸ್ಲಿಮರನ್ನು ಗುಂಡು ಹಾರಿಸಿ ಕೊಲ್ಲುವುದಾಗಿ ಬಹಿರಂಗವಾಗಿ ಘೋಷಿಸಿರುವ ಸಕಲೇಶಪುರದ ರಘು ಎಂಬ ಸಮಾಜಘಾತಕನನ್ನು ಪೋಲೀಸರು ಕೂಡಲೇ ಬಂಧಿಸುವಂತೆ ಸಿಪಿಐಎಂ ಹಾಸನ ಜಿಲ್ಲಾ ಸಮಿತಿಯು ಆಗ್ರಹಿಸುತ್ತದೆ. ಹಾಗೂ ಆತನ ಮೇಲೆ ಕೊಲೆಗೆ ಪ್ರಚೋದನೆ, ಭಯೋತ್ಪಾದನೆ ಹಾಗೂ ಕೋಮು ಗಲಭೆಗೆ ಪ್ರಚೋದನೆ ನೀಡಿಕೆಗೆ ಸಂಬಂಧಿಸಿದ ಕಾಯ್ದೆಗಳನ್ವಯ ಕೇಸು ದಾಖಲಿಸಿ ಜೈಲಿಗೆ ಕಳುಹಿಸಬೇಕೆನ್ನುವುದು ಸಿಪಿಐಎಂ ಒತ್ತಾಯವಾಗಿದೆ.

ಸಕಲೇಶಪುರದ ರಘು ಎಂಬ ಸಮಾಜಘಾತುಕ ಭಜರಂಗದಳದ ಹೆಸರಿನಲ್ಲಿ ಹಲವಾರು ಅಕ್ರಮ ಹಾಗೂ ಕುಕೃತ್ಯಗಳನ್ನು ನಡೆಸಿರುತ್ತಾನೆ. ಅವನ ಮೇಲೆ ಈಗಾಗಲೇ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ‘ಗೋರಕ್ಷಣೆ’, ‘ಹಿಂದೂ’ ಧರ್ಮ ರಕ್ಷಣೆ ಹೆಸರಿನಲ್ಲಿ ರೋಲ್‌ಕಾಲ್, ಗೂಂಡಾಗಿರಿಯಂತಹ ಹಲವಾರು ಕಾನೂನು ಭಾಹಿರ ಚಟುವಟಿಕೆಯಲ್ಲಿ ತೊಡಗಿದ್ದಾನೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅವನ ವಿರುದ್ಧ ಪೋಲೀಸರು ಕಠಿಣ ಕ್ರಮ ಜರುಗಿಸಲು ವಿಫಲರಾಗಿದ್ದರು. ಸಕಲೇಶಪುರ ತಾಲ್ಲೂಕಿನಲ್ಲಿ ಕೆಲವು ಪೋಲೀಸರೂ ಅವನೊಂದಿಗೆ ಶಾಮೀಲಾಗಿರುವ ಮಾತುಗಳಿವೆ. ಈಗ ಸಕಲೇಶಪುರ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಆಯ್ಕೆಯಾಗಿರುವುದು ಆತನಿಗೆ ಮತ್ತಷ್ಟು ಉತ್ತೇಜನ ಸಿಕ್ಕಂತಾಗಿದೆ. ಸಕಲೇಶಪರ ಕ್ಷೇತ್ರದ ಬಿಜೆಪಿ ಶಾಸಕ ಸಿಮೆಂಟ್ ಮಂಜು ಬೆಂಬಲಿಗನಾಗಿರುವ ರಘು ವಿರುದ್ಧ ಪೋಲೀಸರು ಅತ್ಯಂತ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಬೇಕಿದೆ.

ನಾಗರಿಕ ಸಮಾಜ ಮತ್ತು ಸರ್ಕಾರಕ್ಕೆ ಸವಾಲಾಗಿರುವ ಇಂತಹ ದುಷ್ಟ ಶಕ್ತಿಗಳ ನಿಗ್ರಹಕ್ಕೆ ರಾಜ್ಯ ಸರ್ಕಾರ ಮುಂದಾಗಬೇಕು. ಸಂವಿಧಾನದ ಕಾನೂನುಗಳ ಆಡಳಿತದ ಸರಾಗವಾಗವಾಗಿ ನಡೆಯಬೇಕಿದ್ದರೆ ರಘುನಂತಹ ದುಷ್ಟರ ವಿರುದ್ಧ ಅತ್ಯಂತ ಕಠಿಣ ಕ್ರಮ ಜರುಗಿಸುವ ಮುಖಾಂತರ ಅಂತಹ ದುಷ್ಟ ಶಕ್ತಿಗಳಿಗೆ ಸ್ಪಷ್ಟ ಸಂದೇಶವನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಬೇಕು. ಇಲ್ಲದಿದ್ದರೆ ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪೋಲೀಸು ಇಲಾಖೆಯ ವಿರುದ್ಧ ತೀವ್ರ ಹೋರಾಟಕ್ಕೆ ಇಲಿಯುವಯದು ಅನಿವಾರ್ಯವಾಗಲಿದೆ ಎಂದು ಸಿಪಿಐಎಂ ಮನವರಿಕೆ ಮಾಡಿಕೊಡಲು ಬಯಸುತ್ತದೆ.” ಎಂದು ಸಿಪಿಐಎಂ ಪಕ್ಷದ ಹಾಸನ ಜಿಲ್ಲಾ ಘಟಕದ ಕಾರ್ಯದರ್ಶಿ ಧರ್ಮೇಶ್ ಆಗ್ರಹಿಸಿದ್ದಾರೆ.

ಇದರ ಜೊತೆಗೆ ರಾಜ್ಯ ಎಸ್ಡಿಪಿಐ ಪಕ್ಷ ಕೂಡಾ ಈತನ ಕುಕೃತ್ಯಗಳ ಬಗ್ಗೆ ಪ್ರಸ್ತಾಪಿಸಿ ಶೀಘ್ರದಲ್ಲೇ ಈತನ ಬಂಧನವಾಗಲಿ ಎಂದು ಆಗ್ರಹಿಸಿದೆ‌. ಅದರಂತೆ
“ಗುಂಡು ಹೊಡೆದು ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡಿರುವ ರಘು ಸಕಲೇಶಪುರ ನನ್ನು ತಕ್ಷಣ ಬಂಧಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಲು ಗೃಹಮಂತ್ರಿ ಜಿ.ಪರಮೇಶ್ವರ್ ಅವರಲ್ಲಿ ಆಗ್ರಹಿಸುತ್ತೇನೆ. ಈತ ಈ ಹಿಂದೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಶಾಲೆಯೊಂದರಲ್ಲಿ ನಡೆದಿದ್ದ ಸಂಘದ ಕಾರ್ಯಕರ್ತರಿಗೆ ಕಾನೂನು ಬಾಹಿರ ಬಂದೂಕು ತರಬೇತಿ ಹಾಗೂ ಶಸ್ತ್ರ ದೀಕ್ಷೆಯಲ್ಲಿ ಭಾಗವಹಿಸಿ ಸಕಲೇಶಪುರದಿಂದ ನಿರಂತರವಾಗಿ ಕೊಡಗು ಜಿಲ್ಲೆಗೆ ಆಗಮಿಸಿ ಕೋಮು ವೈಷಮ್ಯವನ್ನು ಮೂಡಿಸಿ ಸಮಾಜದ ಶಾಂತಿ ಕದಡಲು ಯತ್ನಿಸಿದ್ದ ಸಂಧರ್ಭದಲ್ಲೇ ಬಂಧಿಸಿ ಅಕ್ರಮ ಶಸ್ತ್ರಾಸ್ತ್ರಗಳ ಸಂಗ್ರಹ ಮತ್ತು ತರಬೇತಿ ಬಗ್ಗೆ ಕೂಲಂಕಷ ತನಿಖೆ ನಡೆಸುವಂತೆ ಎಸ್ಡಿಪಿಐ ಪಕ್ಷ ಅಂದೇ ಪೋಲಿಸ್ ಇಲಾಖೆಯನ್ನು ಆಗ್ರಹಿಸಿತ್ತು. ತ್ರಿಶೂಲ ದೀಕ್ಷೆ ನೀಡಿದ ಬಳಿಕ ತ್ರಿಶೂಲ ದೀಕ್ಷೆ ನೀಡಿದ ಬಳಿಕ ಭಜರಂಗದಳ ಗೂಂಡಗಳು ಅದನ್ನು ನಾಗರಿಕರ ಮತ್ತು ವಿಧ್ಯಾರ್ಥಿಗಳ ವಿರುದ್ಧ ಬಳಸಿ ಕೊಲೆಯತ್ನದಂತಹ ಕೃತ್ಯವನ್ನು ನಡೆಸಿರುವ ಉದಾಹರಣೆಗಳು ಇವೆ, ಅಲ್ಲದೇ ನೆರೆಯ ಕೇರಳದಲ್ಲಿ ಕೂಡ ಸಂಘಪರಿವಾರ ಈ ರೀತಿಯ ಬಂದೂಕು,ಪೆಟ್ರೋಲ್ ಬಾಂಬ್ ತರಬೇತಿ ನೀಡಿ ಪೋಲಿಸ್ ಠಾಣೆಗಳ ಮೇಲೆಯೇ ದಾಳಿ ನಡೆಸಿದ ಹಲವಾರು ನಿದರ್ಶನಗಳು ಇವೆ.” ಎನ್ನುವ ಮೂಲಕ SDPI ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು