Monday, July 7, 2025

ಸತ್ಯ | ನ್ಯಾಯ |ಧರ್ಮ

ಸುಳ್ಳು ಸುದ್ದಿ ಹಬ್ಬಿಸುವ ಮಾಧ್ಯಮಗಳಿಗೆ ಕಡಿವಾಣ ; ಮುಂದಿನ ಅಧಿವೇಶನದಲ್ಲೇ ವಿಧೇಯಕ ಮಂಡನೆ: ಸಚಿವ ಪರಮೇಶ್ವರ್

ರಾಜ್ಯದಲ್ಲಿ ಸುಳ್ಳು ಸುದ್ದಿ ಪ್ರಕಟಿಸುವ, ಉದ್ದೇಶಪೂರ್ವಕವಾಗಿ ಸುಳ್ಳು ಸುದ್ದಿ ವೈರಲ್ ಮಾಡುವ ಮಾಧ್ಯಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುವುದು ಎಂದು ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ತುಮಕೂರಿನಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸುಳ್ಳು ಸುದ್ದಿ ನಿಯಂತ್ರಣಕ್ಕೆ ಸದ್ಯದಲ್ಲೇ ಕಾನೂನು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಕಠಿಣ ಕಾನೂನು ಜಾರಿಯ ಜೊತೆಗೆ ಸರ್ಕಾರಿ ಕಚೇರಿಗಳಲ್ಲಿ ಯೂಟ್ಯೂಬ್, RTI ಕಾರ್ಯಕರ್ತರು ಕಿರುಕುಳವೂ ಹೆಚ್ಚಾಗುತ್ತಿದೆ. ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ರಕ್ಷಣೆ ಕೋರಿ ಹಲವು ಮನವಿ, ದೂರು ನೀಡಲಾಗಿದೆ. ಈ ಬಗ್ಗೆಯೂ ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page