Sunday, June 22, 2025

ಸತ್ಯ | ನ್ಯಾಯ |ಧರ್ಮ

ಪಟಾಕಿ ಅಂಗಡಿಗೆ ಬೆಂಕಿ: 9 ಮಂದಿಗೆ ಗಾಯ

ಲಕ್ನೋ: ಪಟಾಕಿ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ನಂತರ ಅದು ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದ್ದು ಒಟ್ಟು ಏಳು ಅಂಗಡಿಗಳು ಧ್ವಂಸಗೊಂಡಿವೆ. ಉತ್ತರ ಪ್ರದೇಶದ ಮಥುರಾದಲ್ಲಿ ಈ ಘಟನೆ ನಡೆದಿದೆ. ನಗರದ ಹೊರವಲಯದ ಗೋಪಾಲಬಾಗ್‌ನಲ್ಲಿ ಸ್ಥಾಪಿಸಲಾಗಿದ್ದ ಪಟಾಕಿ ಅಂಗಡಿಯಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿದೆ. ಸಮೀಪದಲ್ಲೇ ಇದ್ದ ಇತರ ಆರು ಪಟಾಕಿ ಅಂಗಡಿಗಳಿಗೂ ಬೆಂಕಿ ವ್ಯಾಪಿಸಿದೆ. ಇದರಿಂದ ಏಳು ಅಂಗಡಿಗಳಲ್ಲಿ ಮಾರಾಟಕ್ಕೆ ಇಟ್ಟಿದ್ದ ಪಟಾಕಿ ಸುಟ್ಟು ಕರಕಲಾಗಿದೆ. ಈ ಅಪಘಾತದಲ್ಲಿ 9 ಮಂದಿಗೆ ಸುಟ್ಟ ಗಾಯಗಳಾಗಿವೆ.

ಆದರೆ, ಈ ವಿಷಯ ತಿಳಿದ ಕೂಡಲೇ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಸ್ಪಂದಿಸಿದರು. ಅಕ್ಕಪಕ್ಕದ ಪಟಾಕಿ ಅಂಗಡಿಗಳಿಗೂ ವ್ಯಾಪಿಸಿದ ಬೆಂಕಿಯನ್ನು ನಂದಿಸಲಾಯಿತು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪಟಾಕಿ ಅಂಗಡಿಯೊಂದರಲ್ಲಿ ಕಾಣಿಸಿಕೊಂಡ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡು ನಂತರ ಇತರ ಅಂಗಡಿಗಳಿಗೂ ವ್ಯಾಪಿಸಿರಬಹುದೆಂದು ಪೊಲೀಸರು ಹಾಗೂ ಅಗ್ನಿಶಾಮಕ ನಿಯಂತ್ರಣಾಧಿಕಾರಿಗಳು ಶಂಕಿಸಿದ್ದಾರೆ. ಸ್ಥಳೀಯವಾಗಿ ಆತಂಕ ಮೂಡಿಸಿದ್ದ ಈ ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page