ಕಾಸರಗೋಡು: ದೇವಸ್ಥಾನದಲ್ಲಿ ಪಟಾಕಿ ಸಿಡಿಸುವ ವೇಳೆ ಅವಘಡ, 150ಕ್ಕೂ ಹೆಚ್ಚು ಮಂದಿಗೆ ಗಾಯ, 8 ಮಂದಿಯ ಸ್ಥಿತಿ ಚಿಂತಾಜನಕ

ಕೇರಳದ ಕಾಸರಗೋಡು ಜಿಲ್ಲೆಯ ನೀಲೇಶ್ವರ ಸಮೀಪದ ದೇವಸ್ಥಾನದಲ್ಲಿ ಪಟಾಕಿ ಸಿಡಿಸುವ ವೇಳೆ ಭೀಕರ ಅಪಘಾತ ಸಂಭವಿಸಿದೆ. ಸೋಮವಾರ ತಡರಾತ್ರಿ ನಡೆದ ಈ ಅಪಘಾತದಲ್ಲಿ 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 8 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ.

ಸಿಕ್ಕಿರುವ ಮಾಹಿತಿಯ ಪ್ರಕಾರ ವೀರಕಾವು ದೇವಸ್ಥಾನದ ಬಳಿಯ ಪಟಾಕಿ ಸಂಗ್ರಹದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಈ ದುರ್ಘಟನೆ ಸಂಭವಿಸಿದೆ.

ಅಪಘಾತ ಸಂಭವಿಸಿದ ಕೂಡಲೇ ಗಾಯಾಳುಗಳನ್ನು ಕಾಸರಗೋಡು, ಕಣ್ಣೂರು ಮತ್ತು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಂತಾಜನಕ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲಾಡಳಿತದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಸಂತ್ರಸ್ತರಿಗೆ ಪರಿಹಾರ ನೀಡಲು ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

Related Articles

ಇತ್ತೀಚಿನ ಸುದ್ದಿಗಳು