Home ದೇಶ ಕ್ರಿಕೆಟಿಗ ಶ್ರೀಶಾಂತ್ ವಿರುದ್ಧ ವಂಚನೆ ಪ್ರಕರಣ ದಾಖಲು

ಕ್ರಿಕೆಟಿಗ ಶ್ರೀಶಾಂತ್ ವಿರುದ್ಧ ವಂಚನೆ ಪ್ರಕರಣ ದಾಖಲು

0

ಉತ್ತರ ಕೇರಳದ ಕಣ್ಣೂರು ಜಿಲ್ಲೆಯ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಶ್ರೀಶಾಂತ್ ಮತ್ತು ಇತರ ಇಬ್ಬರ ವಿರುದ್ಧ ಪೊಲೀಸರು ವಂಚನೆ ಪ್ರಕರಣ ದಾಖಲಿಸಿದ್ದಾರೆ.

ಕರ್ನಾಟಕದ ಕೊಲ್ಲೂರಿನಲ್ಲಿ ಕ್ರಿಕೆಟಿಗ ಶ್ರೀಶಾಂತ್ ಕ್ರೀಡಾ ಅಕಾಡೆಮಿ ನಿರ್ಮಿಸುವುದಾಗಿ ಹೇಳಿ ಹಣ ವಸೂಲಿ ಮಾಡಿದ್ದಾರೆ ಎಂದು ಸಂತ್ರಸ್ತರು ಪೊಲೀಸರಿಗೆ ದೂರು ನೀಡಿದ್ದಾರೆ. ಏಪ್ರಿಲ್ 25, 2019ರಿಂದ ಆರೋಪಿಗಳಾದ ರಾಜೀವ್ ಕುಮಾರ್ ಮತ್ತು ವೆಂಕಟೇಶ್ ಅವರಿಗೆ ರೂ. 18.70 ಲಕ್ಷಗಳನ್ನು ತೆಗೆದುಕೊಂಡಿದ್ದಾರೆ ಎಂದು ಚೂಂಡಾ ಎನ್ನುವ ಊರಿನವರಾದ ದೂರುದಾರರು ಆರೋಪಿಸಿದ್ದಾರೆ.

ಅಕಾಡೆಮಿಯಲ್ಲಿ ಪಾಲುದಾರನಾಗಲು ಅವಕಾಶ ಸಿಕ್ಕಿದ್ದರಿಂದ ಹಣ ಹೂಡಿಕೆ ಮಾಡಿದ್ದೇನೆ ಎಂದು ಸರೀಶ್ ಗೋಪಾಲನ್ ದೂರಿನಲ್ಲಿ ತಿಳಿಸಿದ್ದಾರೆ. ಶ್ರೀಶಾಂತ್ ಮತ್ತು ಇತರ ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 420 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಶ್ರೀಶಾಂತ್ ಅವರನ್ನು ಮೂರನೇ ಆರೋಪಿಯನ್ನಾಗಿ ಮಾಡಲಾಗಿದೆ.

You cannot copy content of this page

Exit mobile version