Sunday, January 11, 2026

ಸತ್ಯ | ನ್ಯಾಯ |ಧರ್ಮ

ಇಂದು CWC ಸಭೆ.. ಪ್ರಣಾಳಿಕೆಗೆ ಅನುಮೋದನೆ.. ಅಭ್ಯರ್ಥಿಗಳ ಪಟ್ಟಿ ಅಂತಿಮ!

ಹೊಸದಿಲ್ಲಿ: ಸಾರ್ವತ್ರಿಕ ಚುನಾವಣೆ ವೇಳಾಪಟ್ಟಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಗೆಲುವಿನ ತಂತ್ರಗಳನ್ನು ಸಿದ್ಧಪಡಿಸಲು ಕಾಂಗ್ರೆಸ್‌ನ ಅತ್ಯುನ್ನತ ನಿರ್ಧಾರ ಕೈಗೊಳ್ಳುವ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಮಂಗಳವಾರ ಸಭೆ ಸೇರಲಿದೆ.

ಈ ಸಭೆಯಲ್ಲಿ ಲೋಕಸಭೆ ಚುನಾವಣಾ ಪ್ರಣಾಳಿಕೆಗೆ ಅಂತಿಮ ರೂಪುರೇಷೆ ದೊರೆಯಲಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಮತ್ತು ಪ್ರಮುಖ ನಾಯಕರೊಂದಿಗೆ ಈ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಅಭ್ಯರ್ಥಿಗಳ ಆಯ್ಕೆ ಕುರಿತು ಸಿಇಸಿ ಸಭೆ

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಕುರಿತು ಈಗಾಗಲೇ ಹಲವು ಬಾರಿ ಸಭೆ ನಡೆಸಿರುವ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಮಂಗಳವಾರ ಮತ್ತೆ ಸಭೆ ಸೇರಲಿದೆ. ಈಗಾಗಲೇ ಎರಡು ಕಂತುಗಳಲ್ಲಿ 82 ಮಂದಿಯ ಹೆಸರನ್ನು ಪ್ರಕಟಿಸಲಾಗಿದೆ. 19ರಂದು ನಡೆಯುವ ಸಭೆಯಲ್ಲಿಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page