Tuesday, April 8, 2025

ಸತ್ಯ | ನ್ಯಾಯ |ಧರ್ಮ

ಐಪಿಎಲ್ ಬೆಟ್ಟಿಂಗ್ ಪ್ರಮೋಷನ್; ಸೋಷಿಯಲ್ ಮೀಡಿಯಾ ಸೆಲೆಬ್ರಿಟಿಗಳ ಚಳಿ ಬಿಡಿಸಿದ ಸೈಬರ್ ಕ್ರೈಂ

ಐಪಿಎಲ್ ಬೆಟ್ಟಿಂಗ್ ಗೆ ಪ್ರಮೋಷನ್ ನೀಡಿದ ಹಿನ್ನೆಲೆಯಲ್ಲಿ ಸೋಷಿಯಲ್ ಮೀಡಿಯಾದ 40 ಕ್ಕೂ ಹೆಚ್ಚು ಸೆಲೆಬ್ರಿಟಿಗಳಿಗೆ ಸೈಬರ್ ಕ್ರೈಂ ಪೊಲೀಸರು ನೋಟಿಸ್ ನೀಡಿದ್ದಾರೆ. ಈ ದಿನಗಳಲ್ಲಿ ಬೆಟ್ಟಿಂಗ್ ದಂಧೆ ರಾಜಾರೋಷವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವರುಣ್ ಆರಾಧ್ಯ, ಸೋನುಗೌಡ, ಶಿಲ್ಪಾಗೌಡ, ದೀಪಕ್ ಗೌಡ ಸೇರಿ 40ಕ್ಕೂ ಹೆಚ್ಚು ಸೋಶಿಯಲ್ ಮೀಡಿಯಾ ಸೆಲೆಬ್ರಿಟಿಗಳ ಸೋಷಿಯಲ್ ಮೀಡಿಯಾ ಖಾತೆಗಳ ಮೇಲೆ ನಿಗಾ ಇರಿಸಿರುವ ಸೈಬರ್ ಕ್ರೈಂ ಪೊಲೀಸರು ಬೆಟ್ಟಿಂಗ್ ದಂಧೆ ತಡೆಯಲು ಕ್ರಮ ಕೈಗೊಂಡಿದ್ದಾರೆ. ಎಲ್ಲಾ ಸೆಲೆಬ್ರಿಟಿಗಳ ಜಾಲತಾಣದ ಖಾತೆ ಮೇಲೆ ನಿಗಾ ಇರಿಸಿದ ಪೊಲೀಸರು ಜಾಲತಾಣಗಳ ಚಟುವಟಿಕೆಗಳನ್ನು ನೋಡಿ ಈ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಬೆಟ್ಟಿಂಗ್ ಪ್ರಮೋಷನ್ ಮರುಕಳಿಸಿದರೆ ಕ್ರಮ ಎದುರಿಸಬೇಕಾಗುತ್ತದೆ ಎಂದು ಪೊಲೀಸರು ವಾರ್ನಿಂಗ್ ನೀಡಿದ್ದಾರೆ.

40 ಕ್ಕೂ ಹೆಚ್ಚು ಸೆಲೆಬ್ರಿಟಿಗಳಿಗೆ ನೋಟೀಸ್ ನೀಡಿ ವಿಚಾರಣೆಗೆ ಕರೆಯಲಾಗಿದೆ. ಸೋಮವಾರ 20 ಸೆಲೆಬ್ರಿಟಿಗಳ ವಿಚಾರಣೆ ನಡೆದಿದೆ. ಇನ್ನೂ 20 ಕ್ಕೂ ಹೆಚ್ಚು ಸೆಲೆಬ್ರಿಟಿಗಳಿಗೆ ಇಂದು ವಿಚಾರಣೆ ನಡೆಯಲಿದೆ. ರಾಜ್ಯದ ಮೂಲೆ ಮೂಲೆಗಳಲ್ಲಿರುವ ಸೆಲೆಬ್ರಿಟಿಗಳನ್ನೂ ವಿಚಾರಣೆಗೆ ಕರೆಯಲಾಗಿದೆ ಎಂದು ಸೈಬರ್ ಕ್ರೈಂ ಪೊಲೀಸರು ತಿಳಿಸಿದ್ದಾರೆ.

ಮಂಗಳೂರು, ಮಂಡ್ಯ, ಹುಬ್ಬಳ್ಳಿ ಎಲ್ಲಾ ಜಿಲ್ಲೆಗಳಲ್ಲಿರುವ ಜಾಲತಾಣಗಳ ಸೆಲೆಬ್ರಿಟಿಗಳ ಕರೆಸಿ ವಿಚಾರಣೆ ಮಾಡಿದ್ದಾರೆ. ಇನ್ಮುಂದೆ ಬೆಟ್ಟಿಂಗ್ ಪ್ರಮೋಷನ್ ಮಾಡದಂತೆ ಖಡಕ್ ವಾರ್ನ್ ಮಾಡಿ ಕಳುಹಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page