ಬೆಂಗಳೂರು : ರಾಜ್ಯದಲ್ಲಿ (karnataka) ಶಕ್ತಿ ಸೈಕ್ಲೋನ್ ಎಫೆಕ್ಟ್ ನಿಂದಾಗಿ ಅ.12 ರ ವರೆಗೆ (Rain Update) ಮಳೆಯಾಗಲಿದ್ದು, ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಗುಡುಗು ಮತ್ತು ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಶಕ್ತಿ ಸೈಕ್ಲೋನ್ ನಿಂದಾಗಿ ರಾಜ್ಯದ 9 ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ. ಮುಂದಿನ 2 -3 ದಿನ ವ್ಯಾಪಕ ಮಳೆ ಬೀಳಲಿದ್ದು, 9 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ತುಮಕೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇಂದು ಬೆಳಗಿನ ಜಾವದಲ್ಲಿ ಸ್ವಲ್ಪ ಬಿಸಿಲು ಕಂಡುಬಂದರೂ, ಮಧ್ಯಾಹ್ನ 2 ಗಂಟೆಯ ನಂತರ ಅಥವಾ ಸಂಜೆಯ ವೇಳೆಗೆ ಬೆಂಗಳೂರಿನಲ್ಲಿ ಗುಡುಗು ಮತ್ತು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ನಾಳೆ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ನಿರೀಕ್ಷೆ ಇದೆ.
ಇನ್ನು ಬೆಂಗಳೂರಿನ ಕೆಲ ಭಾಗದಲ್ಲಿ ನಿನ್ನೆ ರಾತ್ರಿ ಗುಡುಗು ಮಿಂಚು ಸಹಿತ ಉತ್ತಮ ಮಳೆಯಾಗಿದೆ. ಅ-10 ಮತ್ತು 11ರಂದು ರಾಜ್ಯದ ಹಲವೆಡೆ ಮಳೆ ಬೀಳಲಿದೆ. ಪ್ರಮುಖವಾಗಿ ಈ ಎರಡು ದಿನ
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರುಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಂತರ, ಬೆಂಗಳೂರು ನಗರ, ಚಾಮರಾಜನಗರದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.