Sunday, September 21, 2025

ಸತ್ಯ | ನ್ಯಾಯ |ಧರ್ಮ

ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಖ್ಯಾತ ನಟ ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಎನ್ನಿಸಿಕೊಂಡ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಪ್ರಕಟಿಸಿದೆ.

ಭಾರತೀಯ ಚಿತ್ರರಂಗಕ್ಕೆ ನೀಡಿದ ಅಮೋಘ ಮತ್ತು ಅಪ್ರತಿಮ ಕೊಡುಗೆಗಾಗಿ ದಂತಕಥೆಯ ನಟ, ನಿರ್ದೇಶಕ ಮತ್ತು ನಿರ್ಮಾಪಕರನ್ನು ಗೌರವಿಸಲಾಗುತ್ತಿದೆ. ಈ ಬಾರಿ ನಟಿ ಮೋಹನ್ ಲಾಲ್ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ” ಎಂದು ಸಚಿವಾಲಯ ಎಕ್ಸ್ ಪೋಸ್ಟ್‌ ನಲ್ಲಿ ತಿಳಿಸಿದೆ.

ಸೆಪ್ಟೆಂಬರ್ 23 ರಂದು ನಡೆಯಲಿರುವ 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.

2022ರ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಮಿಥಿನ್ ಚಕ್ರವರ್ತಿ ಅವರಿಗೆ ನೀಡಿ ಗೌರವಿಸಲಾಗಿತ್ತು. 2019 ರಲ್ಲಿ ತಮಿಳಿನ ಸೂಪರ್ ಸ್ಟಾರ್ ರಜನೀಕಾಂತ್ ಅವರಿಗೆ ನೀಡಲಾಗಿತ್ತು. ಈಗ ದಕ್ಷಿಣದ ಮತ್ತೊಬ್ಬ ಸೂಪರ್ ಸ್ಟಾರ್ ಆಗಿರುವ ಹಾಗೂ ಅತ್ಯದ್ಭುತ ನಟರಾಗಿರುವ ಮೋಹನ್ ಲಾಲ್ ಅವರಿಗೆ ನೀಡಲಾಗಿದೆ. ಮೋಹನ್ ಲಾಲ್ ಅವರು ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಆಗಿರುವುದಕ್ಕೆ ಹಲವಾರು ಸಿನಿಮಾ ಸೆಲೆಬ್ರಿಟಿಗಳು, ರಾಜಕಾರಣಿಗಳು ಶುಭಾಶಯಗಳನ್ನು ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಹ ಮೋಹನ್​​ಲಾಲ್ ಅವರಿಗೆ ಶುಭಾಶಯ ಕೋರಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page