Monday, July 28, 2025

ಸತ್ಯ | ನ್ಯಾಯ |ಧರ್ಮ

ಡಾರ್ಲಿಂಗ್ ಕೃಷ್ಣ ಅಭಿನಯದ “Mr ಬ್ಯಾಚುಲರ್” ಚಿತ್ರ ಜ.6ಕ್ಕೆ ಬಿಡುಗಡೆ

ಬೆಂಗಳೂರು: ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ “Mr ಬ್ಯಾಚುಲರ್” ಚಿತ್ರಕ್ಕಾಗಿ ಮಾರುತಿ ಅವರು ಬರೆದಿರುವ “ಮದುವೆ ಯಾವಾಗ” ಎಂಬ ಸೊಗಸಾದ ಹಾಡು ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಈ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದರು. ವಿಜಯ್ ಪ್ರಕಾಶ್ ಹಾಡಿರುವ ಈ ಹಾಡಿಗೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ.

ಈ ಸಿನಿಮಾ ಬಗ್ಗೆ ಡಾರ್ಲಿಂಗ್‌ ಕೃಷ್ಣ ಮಾತನಾಡಿ, ʼನಾನು “ಲವ್ ಮಾಕ್ಟೇಲ್” ಚಿತ್ರ ಆರಂಭಿಸುವುದಕ್ಕೂ ಮುನ್ನ ಆರಂಭವಾದ ಚಿತ್ರವಿದು. ಈ ಚಿತ್ರದ ಸಂಭಾವನೆಯಿಂದಲೇ ನಾನು “ಲವ್ ಮಾಕ್ಟೇಲ್” ಶುರು ಮಾಡಿದ್ದು. ಹಾಗಾಗಿ ನನಗೆ ಈ ಚಿತ್ರದ ಮೇಲೆ ವಿಶೇಷ ಪ್ರೀತಿ.  ನಾಯ್ಡು ಅವರ ನಿರ್ದೇಶನದಲ್ಲಿ ಈ ಚಿತ್ರ ಚೆನ್ನಾಗಿ ಬಂದಿದೆ. ಮನೋರಂಜನೆಯ ಜೊತೆಗೆ ಆಕ್ಷನ್, ಸೆಂಟಿಮೆಂಟ್ ಸನ್ನಿವೇಶಗಳು ಇದೆ‌. ನಿಮಿಕಾ ರತ್ನಾಕರ್ ಅವರು ನಾಯಕಿಯಾಗಿ ಅಭಿನಯಿಸಿದ್ದಾರೆ. ವಿಶೇಷಪಾತ್ರದಲ್ಲಿ ಮಿಲನ ನಾಗರಾಜ್ ಇದ್ದಾರೆ. 2023 ಜನವರಿ 6 ರಂದು ಚಿತ್ರ ಬಿಡುಗಡೆಯಾಗುತ್ತಿದೆʼ ಎಂದು ತಿಳಿಸಿದ್ದಾರೆ.

ʼನಾನು ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಅವರ ಬಳಿ ಕೆಲಸ ಮಾಡುತ್ತಿದೆ‌. ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಮದುವೆ ವಯಸ್ಸಿಗೆ ಬಂದ ಹುಡುಗನನ್ನು ಸಾಮಾನ್ಯವಾಗಿ ಎಲ್ಲರು ಮದುವೆ ಯಾವಾಗ? ಅಂತ ಕೇಳುತ್ತಾರೆ. ಇಂದು ಬಿಡುಗಡೆಯಾಗಿರುವ ಈ ಹಾಡು ಕೂಡ  ಆ ವಾಕ್ಯದಿಂದಲೇ ಆರಂಭವಾಗುತ್ತದೆ‌. ಶ್ರೀನಿವಾಸ್, ಹನುಮಂತ ರಾವ್ ಹಾಗೂ ಸ್ವರ್ಣಲತ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ ಹಾಗೂ ಶ್ರೀ ಕ್ರೇಜಿಮೈಂಡ್ಸ್ ಛಾಯಾಗ್ರಹಣ – ಸಂಕಲನ ಈ ಚಿತ್ರಕ್ಕಿದೆ. ಡಾರ್ಲಿಂಗ್ ಕೃಷ್ಣ, ಮಿಲನ ನಾಗರಾಜ್, ನಿಮಿಕಾ ರತ್ನಾಕರ್, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ಅಯ್ಯಪ್ಪ ಶರ್ಮ, ಚಿಕ್ಕಣ್ಣ, ಪವಿತ್ರ ಲೋಕೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆʼ‌ ಎಂದು ನಿರ್ದೇಶಕ ನಾಯ್ಡು ಚಿತ್ರದ ಬಗ್ಗೆ ‌ಮಾಹಿತಿ ನೀಡಿದ್ದಾರೆ.

ಚಿತ್ರದ ಕಥೆ ಹಾಗೂ ನನ್ನ ಪಾತ್ರ ಚೆನ್ನಾಗಿದೆ. ಡಾರ್ಲಿಂಗ್ ಕೃಷ್ಣ ಅವರ ಜೊತೆ ನಟಿಸಿದ್ದು ಸಂತೋಷವಾಗಿದೆ ಎಂದು ನಾಯಕಿ ನಿಮಿಕಾ ರತ್ನಾಕರ್ ಹೇಳಿದ್ದಾರೆ.

ನಿರ್ಮಾಪಕ ಶ್ರೀನಿವಾಸ್ ಎಲ್, ಛಾಯಾಗ್ರಾಹಕ ಹಾಗೂ ಸಂಕಲನಕಾರ ಶ್ರೀ ಕ್ರೇಜಿಮೈಂಡ್ಸ್ ಹಾಗೂ ಜಂಕಾರ್ ಮ್ಯೂಸಿಕ್ ಸಂಸ್ಥೆಯ ಭರತ್ ಜೈನ್ “Mr ಬ್ಯಾಚುಲರ್” ಬಗ್ಗೆ ‌ಮಾತನಾಡಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page