Thursday, August 21, 2025

ಸತ್ಯ | ನ್ಯಾಯ |ಧರ್ಮ

BIG BREAKING : ದರ್ಶನ್ ಫಾರಂ ಹೌಸ್ ಮ್ಯಾನೇಜರ್ ಸೂಸೈಡ್ ನೋಟ್ ಪತ್ತೆ

ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಶ್ರೀಧರ್‌ ವಿಷ ಸೇವಿಸಿ ಏಪ್ರಿಲ್‌ 17 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ದಿನಕ್ಕೊಂದರಂತೆ ಪ್ರಕರಣ ಬೇರೆ ಬೇರೆ ಆಯಾಮಕ್ಕೆ ತಿರುವು ಪಡೆದುಕೊಳ್ಳುತ್ತಿದೆ. ವಿಶೇಷ ಎಂದರೆ ಸಾಯುವ ಮುನ್ನ ಬರೆದಿಟ್ಟಿರುವ ಡೆತ್‌ ನೋಟ್‌ ಕೂಡ ಪತ್ತೆಯಾಗಿದೆ.

ಕೀಟನಾಶಕ ಸೇವನೆ ಮಾಡಿ ಶ್ರೀಧರ್ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಆತ ಸಾಯುವ ಮುನ್ನ ಬರೆದಿಟ್ಟಿದ್ದು, ಇದೀಗ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಇಂದು ಸ್ಥಳ ಮಹಜರಿಗಾಗಿ ದರ್ಶನ್‌ ಸೇರಿದಂತೆ ಇತರೆ ಆರೋಪಿಗಳನ್ನು ಮೈಸೂರಿಗೆ ಕರೆದುಕೊಂಡು ಹೋಗಲಾಗುತ್ತಿದೆ.

ರೇಣುಕಾ ಸ್ವಾಮಿ ಹತ್ಯೆ ನಂತರ ಶ್ರೀಧರ್ ಆತ್ಮಹತ್ಯೆ ಬಗ್ಗೆಯೂ ಮಾತುಗಳು ಕೇಳಿ ಬಂದಿದ್ದು ಈ ಬಗ್ಗೆ ನಿಖರ ಕಾರಣಗಳು ತನಿಖೆ ಮೂಲಕ ಹೊರಬರಬೇಕಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page