ತನ್ನ ಅಭಿಮಾನಿಗಳು ಅಶ್ವಿನಿ ಪುನೀತ್‌ರಾಜ್‌ಕುಮಾರ್ ಅವರ ಘನತೆಗೆ ಧಕ್ಕೆ ತರುವಂತಹ ಟ್ವೀಟ್ ಮಾಡಿದ ಕುರಿತು ನಟ ತೂಗುದೀಪ ದರ್ಶನ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ಹೇಳಿಕೆ ನೀಡಿದ್ದು, “ವಿಷಯದ ಕುರಿತು ದರ್ಶನ್ ಅವರು ನನಗೆ ಫೋನ್ ಮಾಡಿದ್ದು, ‘ಈ ರೀತಿ ಮಾಡುವುದು ತಪ್ಪು. ಬೇರೆ ಯಾರೋ ಬೇಕಂತಲೇ ಮಾಡಿ, ನಮ್ಮ ಮೇಲೆ ಹೇಳುತ್ತಿದ್ದಾರೆ. ಇದು ಯಾರು ಮಾಡಿದ್ದಾರೋ ಗೊತ್ತಿಲ್ಲ, ಈ ಬಗ್ಗೆ ವಿಚಾರಿಸಿ ಕ್ರಮಕೈಗೊಳ್ಳಿ ಎಂದು ದರ್ಶನ್ ತಿಳಿಸಿದ್ದಾರೆ’ ಎಂದು ತಿಳಿಸಿರುವುದಾಗಿ ಅವರು ಹೇಳಿದ್ದಾರೆ.
ಅಖಿಲ ಕರ್ನಾಟಕ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘ(ರಿ)ಕೇಂದ್ರ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಪುನೀತ್ ದರ್ಶನ್ ಗೌಡ ಈ ವಿಷಯವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಆರ್‌ಸಿಬಿ ತಂಡ ಸೋಲುತ್ತಿರುವುದಕ್ಕೆ ಅದರ ಉದ್ಘಾಟನಾ ಸಮಾರಂಭಕ್ಕೆ ಅಶ್ವಿನಿಯವರನ್ನು ಕರೆಸಿದ್ದೇ ಕಾರಣ ಎನ್ನುವ ಅರ್ಥ ಬರುವಂತೆ ಗಜಪಡೆ ಎನ್ನುವ ಹೆಸರಿನ ಟ್ವಿಟರ್ ಖಾತೆಯಿಂದ ಪೋಸ್ಟ್ ಮಾಡಲಾಗಿತ್ತು.
ಈ ಪೋಸ್ಟ್ ನಂತರ ವೈರಲ್ ಆಗಿ ಸಾಮಾಜಿಕ ಜಾಲತಾಣದಲ್ಲಿ ಹಲವರು ಈ ಪೋಸ್ಟನ್ನು ಖಂಡಿಸಿ ಪೋಸ್ಟ್ ಹಾಕುವುದರ ಜೊತೆಗೆ ಈ ರೀತಿ ಪೋಸ್ಟ್ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದೂ ಆಗ್ರಹಿಸಿದ್ದರು. ಈ ಕುರಿತಂತೆ ಇದುವರೆಗೆ ಯಾವುದೇ ದೂರು ದಾಖಲಾದ ಕುರಿತು ವರದಿಯಾಗಿಲ್ಲ