Home ಅಪರಾಧ ದರ್ಶನ್ ಸೇರಿ ಇತರೆ ಆರೋಪಿಗಳಿಗೆ​ ವಿಚಾರಣಾಧೀನ ಕೈದಿ ಸಂಖ್ಯೆ ಕೊಟ್ಟ ಪೊಲೀಸರು

ದರ್ಶನ್ ಸೇರಿ ಇತರೆ ಆರೋಪಿಗಳಿಗೆ​ ವಿಚಾರಣಾಧೀನ ಕೈದಿ ಸಂಖ್ಯೆ ಕೊಟ್ಟ ಪೊಲೀಸರು

0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎಲ್ಲಾ ತನಿಖೆ ಮುಗಿಸಿ ಜೈಲು ಸೇರಿರುವ ದರ್ಶನ್ ಮತ್ತು ಇತರೆ ಆರೋಪಿಗಳಿಗೆ ವಿಚಾರಣಾಧೀನ ಖೈದಿ ಸಂಖ್ಯೆ ನೀಡಲಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ A2 ಆರೋಪಿ ದರ್ಶನ್ ತೂಗುದೀಪಗೆ ಇಂದು (ಜೂನ್ 22) ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲಾಗಿದೆ.

ನ್ಯಾಯಾಲಯದ ಕಲಾಪ ಮುಗಿದೊಡನೆ ದರ್ಶನ್ ಹಾಗೂ ಇತರ ಮೂವರು ಆರೋಪಿಗಳನ್ನು ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲಾಗಿದೆ. ಪರಪ್ಪನ ಅಗ್ರಹಾರ ಜೈಲಿನ ಬಳಿ ಬಿಗಿ ಬಂಧೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ದರ್ಶನ್​ಗೆ ಈಗಾಗಲೇ ವಿಚಾರಣಾಧೀನ ಕೈದಿ ಸಂಖ್ಯೆಯನ್ನು ಸಹ ನೀಡಲಾಗಿದೆ.

ದರ್ಶನ್​ಗೆ ವಿಚಾರಣಾಧೀನ ಕೈದಿ ಸಂಖ್ಯೆ 6106 ನ್ನು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದರ ಜೊತೆಗೆ ನ್ಯಾಯಾಂಗ ಬಂಧನಕ್ಕೆ ಒಳಪಟ್ಟ ಆರೋಪಿಗಳಿಗೆ ಕ್ರಮವಾಗಿ, ಧನರಾಜ್​ಗೆ 6107, ವಿನಯ್​ಗೆ 6108, ಪ್ರದೂಶ್​ಗೆ 6109 ಸಂಖ್ಯೆಗಳನ್ನು ನೀಡಲಾಗಿದೆ. ಭದ್ರತೆ ದೃಷ್ಟಿಯಿಂದ ಇತರೆ ಆರೋಪಿಗಳಿಂದ ದೂರಕ್ಕೆ ಇಟ್ಟು ದರ್ಶನ್​ ಅನ್ನು ವಿಶೇಷ ಬ್ಯಾರಕ್​ನಲ್ಲಿ ಇರಿಸಲಾಗಿದೆ.

ಇನ್ನು ಪ್ರಕರಣದ A1 ಆರೋಪಿಯಾಗಿರುವ ಪವಿತ್ರಾ ಗೌಡರನ್ನು ಪರಪ್ಪನ ಅಗ್ರಹಾರದ ಮಹಿಳಾ ವಿಭಾಗದ ಡಿ ಬ್ಯಾರಕ್​ನಲ್ಲಿ ಇರಿಸಲಾಗಿದೆ. ಅವರಿಗೂ ವಿಚಾರಣಾಧೀನ ಖೈದಿ ಸಂಖ್ಯೆ 6024 ಸಂಖ್ಯೆಯನ್ನು ನೀಡಲಾದೆ.

ಇಂದು ನ್ಯಾಯಾಂಗ ಬಂಧನಕ್ಕೆ ಒಳಪಟ್ಟ ಆರೋಪಿಗಳಿಗೆ ಇಂದು ಸೇರಿದಂತೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಜುಲೈ 4 ರವರೆಗೆ ದರ್ಶನ್ ಮತ್ತು ಇತರೆ ಆರೋಪಿಗಳನ್ನು ನ್ಯಾಯಾಂಗ ಬಂಧನದಲ್ಲಿ ಇರಬೇಕಾಗಿದೆ.

ವಿಚಾರಣಾಧೀನ ಕೈದಿಗಳಿಗೆ ಹಲವು ಪರೀಕ್ಷೆಗಳನ್ನು ಮಾಡಿ ಒಳಗೆ ಸೇರಿಸಿಕೊಳ್ಳಲಾಗುತ್ತದೆ. ಅವರ ದೇಹದ ಮೇಲಿರುವ ಮಚ್ಚೆಯಿಂದ ಹಿಡಿದು ಎಲ್ಲವನ್ನೂ ನೋಡಿ ನಮೂದು ಮಾಡಿಕೊಳ್ಳಲಾಗುತ್ತದೆ. ದರ್ಶನ್​ ಸಹ ಬಟ್ಟೆ ಬಿಚ್ಚಿ ಪೊಲೀಸರೆದುರು ಪರೀಕ್ಷೆಗೆ ಒಳಪಟ್ಟಿದ್ದಾರೆ. ಅದಾದ ಬಳಿಕವೇ ಅವರಿಗೆ ಯುಟಿಪಿ ಸಂಖ್ಯೆಯನ್ನು ನೀಡಲಾಗಿದೆ.

You cannot copy content of this page

Exit mobile version