ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅಂತ್ಯ ; ಅ.14ಕ್ಕೆ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಮತ್ತು ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ಭವಿಷ್ಯ ಅ.14 ರಂದು ಪ್ರಕಟವಾಗಲಿದೆ. ವಾದ ಪ್ರತಿವಾದಗಳ ಸಂಪೂರ್ಣ ಮುಕ್ತಾಯದೊಂದಿಗೆ ಅಂತಿಮ ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ.

ಸುದೀರ್ಘ ವಿಚಾರಣೆ ನಡೆಸಿದ್ದ ಸೆಷನ್ಸ್‌ ಕೋರ್ಟ್‌ ನ್ಯಾ. ಜೈಶಂಕರ್‌ ಇಂದು ವಿಚಾರಣೆಯನ್ನು ಮುಕ್ತಾಯಗೊಳಿಸಿ ಅ.14 ರಂದು ಜಾಮೀನು ಅದೇಶ ಪ್ರಕಟಿಸುವುದಾಗಿ ತಿಳಿಸಿದರು.

ಇಂದು ದರ್ಶನ್‌ ಪರ ಹಿರಿಯ ಕ್ರಿಮಿನಲ್‌ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರೆ ಪೊಲೀಸರ ಪರವಾಗಿ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದಿಸಿದರು. ದರ್ಶನ್ ಮತ್ತು ಪವಿತ್ರ ಗೌಡ ಇಬ್ಬರ ಜಾಮೀನು ಸಹ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಕೋರ್ಟ್‌ ಅ.14 ರಂದು ಆದೇಶ ಪ್ರಕಟಿಸುವುದಾಗಿ ಹೇಳಿತ್ತು.

ಈ ಹಿನ್ನೆಲೆಯಲ್ಲಿ ಇಂದು ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ತಮ್ಮ ಅಭಿಮಾನಿಗಳ ಕಡೆಗೆ ‘ನನ್ನ ಮನಸ್ಸಿನಲ್ಲಿ ನೀವಿದ್ದೀರಿ’ ಎಂಬಂತೆ ಕೈ ಸನ್ನೆ ಮಾಡಿದ ವಿಡಿಯೋ ಕೂಡ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ದರ್ಶನ್ ಈ ಹಿಂದಿಗಿಂತ ಕೊಂಚ ನಿರಾಳವಾಗಿದ್ದಂತೆ ಕಂಡಿದ್ದು, ಅಕ್ಟೋಬರ್ 14 ಕ್ಕೆ ಜಾಮೀನು ಸಿಗುವ ವಿಶ್ವಾಸದಲ್ಲಿ ಇರುವಂತೆ ಕಂಡುಬಂದಿದೆ.

Related Articles

ಇತ್ತೀಚಿನ ಸುದ್ದಿಗಳು