Friday, June 14, 2024

ಸತ್ಯ | ನ್ಯಾಯ |ಧರ್ಮ

ದಸರಾ 2023 |ಈ ಬಾರಿಯ ನಾಡಹಬ್ಬದ ಉದ್ಘಾಟನೆ ಮಾಡಲಿದ್ದಾರೆ ದೇಸಿ ದನಿ ಹಂಸಲೇಖ

ಮೈಸೂರು: ಸುಪ್ರಸಿದ್ಧ ಮೈಸೂರು ದಸರಾವನ್ನು(Mysuru Dasara) ಈ ವರ್ಷ ‘ನಾದಬ್ರಹ್ಮ’ ಎಂದು ಕರೆಯಲ್ಪಡುವ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಈ ಬಾರಿ ಕೂಡ ಮೈಸೂರು ದಸರಾವನ್ನು ಸಂಪ್ರದಾಯಬದ್ಧವಾಗಿ ಆಚರಿಸಲಾಗುವುದು ಎಂದು ತಮ್ಮ ತವರು ಜಿಲ್ಲೆ ಮೈಸೂರಿನಲ್ಲಿ ಇಂದು ಘೋಷಿಸಿದರು. 

ಅಕ್ಟೋಬರ್ 15ಕ್ಕೆ ದಸರಾ ಉದ್ಘಾಟನೆ: ದಸರಾ ಅಕ್ಟೋಬರ್​ 15ರ ಬೆಳಗ್ಗೆ 10.15ರಿಂದ 10.30ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಅಲ್ಲದೇ ಈ ಬಾರಿ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಲಿದೆ ಎಂದು ಹೇಳಿದರು. 

ಮೈಸೂರಿನ 119 ವೃತ್ತಗಳಲ್ಲಿ ಅಂದರೇ ಬರೋಬ್ಬರಿ 135 ಕಿ.ಮೀ ರಸ್ತೆಗೆ ವಿದ್ಯುತ್ ದೀಪಾಲಂಕಾರ ಮಾಡಲು ತೀರ್ಮಾನಿಸಲಾಗಿದೆ. ಕೆ.ಆರ್.ವೃತ್ತ, ಚಾಮರಾಜ ವೃತ್ತ, ರಾಮಸ್ವಾಮಿ ವೃತ್ತ, ಗನ್​ಹೌಸ್ ವೃತ್ತ, ಎಲ್​ಐಸಿ ವೃತ್ತ ಸೇರಿ ನಗರದ ಹಲವು ಕಡೆ ದೀಪಾಲಂಕಾರ, ಮೈಸೂರಿನ ಸರ್ಕಾರಿ ಕಟ್ಟಡಗಳಿಗೂ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತದೆ ಎಂದರು.

ಇದೇ ವೇಳೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಇಬ್ಬರೂ ಸೇರಿ ಚಾಮುಂಡಿ ದೇವಿಗೆ ಗೃಹಲಕ್ಷ್ಮಿ ಯೋಜನೆಯ ಸಲುವಾಗಿ ಪೂಜೆಯನ್ನು ಸಲ್ಲಿಸಿದರು.

Related Articles

ಇತ್ತೀಚಿನ ಸುದ್ದಿಗಳು