ದಾವಣಗೆರೆ ಜಿಲ್ಲೆಯಾದ್ಯಂತ ಸೆ.2,4,8,ರಂದು ಮದ್ಯ ಮಾರಟ ನಿಷೇಧ

ದಾವಣಗೆರೆ:  ಜಿಲ್ಲೆಯಾದ್ಯಂತ ಗಣೇಶ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಹಿನ್ನಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಸೆಪ್ಟಂಬರ್‌ 02.ಹಾಗೂ 04 ಮತ್ತು 08 ರಂದು  ಬೆಳಗ್ಗೆ 06 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸರಬರಾಜನ್ನು ನಿಷೇಧಗೊಳಿಸಲು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶಿಸಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶದಂತೆ, ಗಣೇಶ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸಂಬಂಧ ಗಣೇಶ ಮೂರ್ತಿಗಳನ್ನು ಮೆರವಣೆಗೆ ಮುಖಾಂತರ ವಿಸರ್ಜನಾ ಸ್ಥಳಗಳಿಗೆ ತೆಗೆದುಕೊಂಡು ಹೋಗಲಿದ್ದು, ಈ ಸಂಧರ್ಭದಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಅತೀ ಅವಶ್ಯಕವಾಗಿರುತ್ತದೆ, ಈ ಕಾರಣ ಮದ್ಯ ಮಾರಾಟ ಮತ್ತು ಸರಬರಾಜನ್ನು ನಿಷೇಧಗೊಳಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು