ದಾವಣಗೆರೆ: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ 55 ನೇ ಹುಟ್ಟು ಹಬ್ಬದ ಹಿನ್ನಲೆ ಅವರ ಅಭಿಮಾನಿಗಳು ಆಯೋಜಿಸಿದ್ದು ರಕ್ತದಾನ ಅಭಿಯಾನದಲ್ಲಿ ಎಸ್. ಎಸ್. ಹೆಲ್ತ್ ಕೇರ್ ಟ್ರಸ್ಟ್ ಅಧ್ಯಕ್ಷೆ ಪ್ರಭಾ ಮಲ್ಲಿಕಾರ್ಜುನ್ ಅವರು ಎಸ್. ಎಸ್. ಮಲ್ಲಿಕಾರ್ಜುನ್ ಅವರ ಕಾರ್ಯವೈಖರಿ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಎಸ್.ಎಸ್. ಮಲ್ಲಿಕಾರ್ಜುನ ಅವರ ಹುಟ್ಟು ಹಬ್ಬದ ಹಿನ್ನಲೆ ಅವರ ಅಭಿಮಾನಿಗಳು ಆಯೋಜಿಸಿದ್ದು ರಕ್ತದಾನ ಅಭಿಯಾನಕ್ಕೆ ಚಾಲನೆ ನೀಡಿದ ಅವರು , ಮಲ್ಲಿಕಾರ್ಜುನ್ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂಬ ನಿಟ್ಟಿನಲ್ಲಿ ಆಯೋಜಿಸಿರುವ ರಕ್ತದಾನದ ಶಿಬಿರವು ಜನರ ಪ್ರೀತಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಹಾಗೂ ಅಭಿಮಾನಿಗಳ ಒತ್ತಾಯದ ಮೇರೆಗೆ ರಕ್ತದಾನ ಕ್ಯಾಂಪ್‌ಗಳನ್ನು ಜಿಲ್ಲೆಯಾದ್ಯಂತ ನಡೆಸಲು ತೀರ್ಮಾನಿಸಿದ್ದು, ಈ ಅಭಿಯಾನವು ಸಂಕಷ್ಟದಲ್ಲಿರುವವರಿಗೆ ರಕ್ತವನ್ನು ಉಚಿತವಾಗಿ ನೀಡುವ ಉದ್ದೇಶ ಹೊಂದಿದೆ, ಹಾಗಾಗೀ ಈ ಶಿಬಿರವು ಡಿಸೆಂಬರ್ 31 ರ ವರೆಗೆ ನಡೆಯಲಿದೆ ಎಂದರು.
ಮುಂದುವರೆದು ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ದಿಯಲ್ಲಿ ಮಲ್ಲಿಕಾರ್ಜುನ್ ಮತ್ತು ಶಾಮನೂರು ಶಿವಶಂಕರಪ್ಪ ಅವರ ಕೊಡುಗೆ ಅಪಾರ. ಅದಕ್ಕೆ ಜನರು ಇಟ್ಟಿರುವ ಅಪಾರ ನಂಬಿಕೆ, ಪ್ರೀತಿ, ವಿಶ್ವಾಸವೇ ಸಾಕ್ಷೀ. ಒಂದು ವೇಳೆ ಜಿಲ್ಲೆ ಅಭಿವೃದ್ಧಿವೊಂದಿ ಸಿಂಗಾಪುರ್ ಅಂತಾಗಬೇಕಿದ್ದರೆ ಮಲ್ಲಿಕಾರ್ಜುನ್ ಗೆಲ್ಲಬೇಕು ಎಂದು ಹೇಳಿದರು.
ಈ ಅಭಿಯಾನದಲ್ಲಿ, ಕೆಪಿಸಿಸಿ ವಕ್ತಾರ ಡಿ. ಬಸವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಪಾಲಿಕೆ ಸದಸ್ಯ ಕೆ. ಚಮನ್ ಸಾಬ್, ಕಾಂಗ್ರೆಸ್ ಮುಖಂಡರಾದ ಕೆ. ಜಿ. ಶಿವಕುಮಾರ್, ಮಾಯಕೊಂಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸವಿತಾ ಬಾಯಿ ಮಲ್ಲೇಶ್ ನಾಯ್ಕ್, ಮೊಹಮದ್ ಜಿಕ್ರಿಯಾ, ಅಬ್ದುಲ್ ಜಬ್ಬಾರ್, ಎಸ್. ಎಸ್. ಹೈಟೆಕ್ ಹಾಗೂ ಬಾಪೂಜಿ ಸಂಸ್ಥೆಯ ಪ್ರಸಾದ್, ವೈದ್ಯರು, ಸಿಬ್ಬಂದಿ, ಎಸ್ ಎಸ್ ಹೈಟೆಕ್ ಆಸ್ಪತ್ರೆಯ ಡಾ. ಪ್ರಸಾದ್, ಬಾಪೂಜಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಕುಮಾರ್, ಜೆಜೆಎಂ ಕಾಲೇಜಿನ ಪ್ರಾಂಶುಪಾಲರಾದ ಮುರುಗೇಶ್, ಶ್ರೀಕಾಂತ್ ಬಂಗೇರಾ, ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಅಧ್ಯಕ್ಷ ಕೆ. ಎಲ್. ಹರೀಶ್ ಬಸಾಪುರ ಮತ್ತಿತರರು ಹಾಜರಿದ್ದರು.