Home ಬ್ರೇಕಿಂಗ್ ಸುದ್ದಿ ರಾಜ್ಯ ಸರಕಾರದ 2 ವರ್ಷದ ಸಾಧನಾ ಸಂಭ್ರಮ,ವಸ್ತು ಪ್ರದರ್ಶನಕ್ಕೆ ಡಿಸಿ ಚಾಲನೆ

ರಾಜ್ಯ ಸರಕಾರದ 2 ವರ್ಷದ ಸಾಧನಾ ಸಂಭ್ರಮ,ವಸ್ತು ಪ್ರದರ್ಶನಕ್ಕೆ ಡಿಸಿ ಚಾಲನೆ

filter: 0; fileterIntensity: 0.000000; filterMask: 0; captureOrientation: 0; shaking: 0.254060; highlight: 0; algolist: 0; multi-frame: 1; brp_mask: 0; brp_del_th: 0.0000,0.0000; brp_del_sen: 0.0000,0.0000; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 320.0;aec_lux_index: 0;albedo: ;confidence: ;motionLevel: 0;weatherinfo: null;temperature: 27;zeissColor: bright;

ಹಾಸನ : ನಗರದ ಜಿಲ್ಲಾ ನ್ಯಾಯಾಲಯದ ಸಂಕೀರ್ಣ ಎದುರು ಇರುವ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜಕನಿಕ ಸಂಪರ್ಕ ಇಲಾಖೆ ವತಿಯಿಂದ ಬುಧವಾರದಂದು ಹಮ್ಮಿಕೊಳ್ಳಲಾಗಿದ್ದ ಎರಡು ವರ್ಷಗಳ ಸಾಧನಾ ಸಂಭ್ರಮ ಪ್ರಗತಿಯತ್ತ ಕರ್ನಾಟಕ ಕುರಿತು ವಸ್ತು ಪ್ರದರ್ಶನವನ್ನು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ಟೇಪ್ ಕತ್ತರಿಸುವುದರ ಮೂಲಕ ಉದ್ಘಾಟಿಸಿದರು.
ಇದೆ ವೇಳೆ ಕಾಂಗ್ರೆಸ್ ಸರಕಾರದ ಎರಡು ವರ್ಷ ಸಾಧನೆ ಕುರಿತು ಹಾಕಲಾಗಿದ್ದ ಛಾಯಚಿತ್ರಗಳನ್ನು ಜಿಲ್ಲಾಧಿಕಾರಿಗಳು ವೀಕ್ಷಣೆ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜೊತೆ ಪೋಟೋಗೆ ಪೋಸ್ ನೀಡಿದರು. ಕೊನೆಯಲ್ಲಿ ಇಡಲಾಗಿದ್ದ ಪುಸ್ತಕದಲ್ಲಿ ತಮ್ಮ ಅನಿಸಿಕೆಗಳನ್ನು ದಾಖಲು ಮಾಡಿದರು. ಬಸ್ ನಿಲ್ದಾಣದಲ್ಲಿ ಕೆಲ ಸಮಯ ಪ್ರಯಾಣಿಕರೊಂದಿಗೆ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಇನ್ನಿತರ ಸೌಲಭ್ಯಗಳು ಸಮರ್ಪಕವಾಗಿ ತಲುಪುತ್ತಿದೆಯಾ ಎಂಬ ಬಗ್ಗೆ ಚರ್ಚಿಸಿದರು. ಜೊತೆಗೆ ಈ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಇದೆ ವೇಳೆ ಜಿಲ್ಲಾಧಿಕಾರಿಗಳು ಮಾಧ್ಯಮದೊಂದಿಗೆ ಮಾತನಾಡಿ, ನಗರದ ಬಸ್ ನಿಲ್ದಾಣದಲ್ಲಿ ನಮ್ಮ ಘನ ಕರ್ನಾಟಕ ಸರಕಾರದ ಸೌಲಭ್ಯಗಳು ಮತ್ತು ಯೋಜನೆಗಳನ್ನು ಜನಗಳಿಗೆ ಈಗಾಗಲೇ ತಲುಪಿಸಲಾಗಿದ್ದು, ಸಾರ್ವಜನಿಕರಿಗೆ ಅದರ ಬಗ್ಗೆ ಮಾಹಿತಿ ಇನ್ನು ಹೆಚ್ಚಿನ ರೀತಿ ತಿಳಿಸಲಾಗುತ್ತಿದೆ. ಇಲ್ಲಿಗೆ ಬಂದು ಹಿರಿಯ ಸಾಮಾನ್ಯ ಮಹಿಳೆ ಜೊತೆ ಸರಕಾರದ ಯೋಜನೆ ಬಗ್ಗೆ ಸಂಭಾಷಣೆ ನಡೆಸಿದಾಗ ಸಂತೋಷ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದ್ದಾರೆ ಎಂದರು. ಇದು ನಿಜವಾದ ಸಾವಜನಿಕರ ಪ್ರತಿಕ್ರಿಯೆ. ಸರಕಾರದ ಯೋಜನೆ ಬಗ್ಗೆ ಜನರು ತಿಳಿದುಕೊಂಡು ಪಡೆದುಕೊಳ್ಳಬೇಕು ಎಂದು ಕೋರುವುದಾಗಿ ಹೇಳಿದರು.
ಇದೆ ವೇಳೆ ಜಿಲ್ಲಾ ಪಂಚಾಯತ್ ಮುಖ್ಯಕರ‍್ಯನಿರ್ವಹಣಾಧಿಕಾರಿ ಬಿ.ಆರ್. ಪೂರ್ಣಿಮಾ, ಜಿಲ್ಲಾ ವಾತಾಧಿಕಾರಿ ಮೀನಾಕ್ಷಿ ಹಾಗೂ ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.

You cannot copy content of this page

Exit mobile version