ಸೂರತ್ ಕಟ್ಟಡ ಕುಸಿತ: ಸಾವಿನ ಸಂಖ್ಯೆ ಏಳಕ್ಕೆ ಏರಿಕೆ

ಗುಜರಾತ್‌ನ ಸೂರತ್‌ನಲ್ಲಿ ಕಟ್ಟಡ ಕುಸಿತದಲ್ಲಿ ಸಾವಿನ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಸುಮಾರು 30 ಫ್ಲ್ಯಾಟ್‌ಗಳಿದ್ದ ಐದು ಅಂತಸ್ತಿನ ಕಟ್ಟಡ ಕುಸಿದಿದೆ.

ಬಿದ್ದಾಗ ನಾಲ್ಕೈದು ಮಂದಿ ಮಾತ್ರ ಕಟ್ಟಡದಲ್ಲಿದ್ದರು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ಇತರ ಏಜೆನ್ಸಿಗಳ ತಂಡಗಳು ರಕ್ಷಣಾ ಕಾರ್ಯವನ್ನು ಕೈಗೊಳ್ಳುತ್ತಿವೆ ಎಂದು ಸೂರತ್ ಪೊಲೀಸ್ ಕಮಿಷನರ್ ಅನುಪಮ್ ಸಿಂಗ್ ಗೆಹ್ಲೋಟ್ ತಿಳಿಸಿದ್ದಾರೆ.

ಜವಳಿ ಉದ್ಯಮದ ಕಾರ್ಮಿಕರು ಈ ಕಟ್ಟಡದಲ್ಲಿ ಬಾಡಿಗೆಗಿದ್ದರು. ಕುಸಿದಿರುವ ಡಿಎನ್ ನಗರ ಸೊಸೈಟಿ ಕಟ್ಟಡ ಶಿಥಿಲಾವಸ್ಥೆಯಲ್ಲಿತ್ತು.

Related Articles

ಇತ್ತೀಚಿನ ಸುದ್ದಿಗಳು