ಕಲಬುರಗಿ, ಸೆಪ್ಟೆಂಬರ್ 17:ಕಲ್ಬುರ್ಗಿಯಲ್ಲಿ ಹೆಚ್ಚಿನ ಮಳೆಯಾಗಿದ್ದು, ಬೆಳೆಹಾನಿಯಾಗಿರುವ ಬಗ್ಗೆ ಜಂಟಿಸಮೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ. ವರದಿ ಬಂದ ನಂತರ ಬೆಳೆಪರಿಹಾದ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕಲ್ಬುರ್ಗಿಯ ಮಳೆಬಾಧಿತ ಪ್ರದೇಶಗಳಿಗೆ ಭೇಟಿನೀಡಿ, ಅಲ್ಲಿನ ಬೆಳೆಹಾನಿಯ ಬಗ್ಗೆ ಪರಿಶೀಲನೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ತೊಗರಿ ಗುಲ್ಬರ್ಗಾದಲ್ಲಿ ಪ್ರಮುಖವಾದ ಬೆಳೆ. ಇಲ್ಲಿನ ರೈತರು ಎರಡು ಬಾರಿ ತೊಗರಿ ಬೆಳೆ ತೆಗೆಯಲು ಪ್ರಯತ್ನಿಸಿದರೂ, ಮಳೆಯಿಂದಾಗಿ ಹೊಲದಲ್ಲಿ ನೀರು ನಿಂತ ಕಾರಣ ಹಾಗೂ ನೆಟ್ಟೆ ರೋಗದಿಂದ ಬೆಳೆ ಹಾಳಾಗಿರುವುದಾಗಿ ತಮ್ಮ ಸಮಸ್ಯೆಯನ್ನು ವಿವರಿಸಿದ್ದಾರೆ. ಹೆಚ್ಚಿನ ಮಳೆಯಾಗಿರುವುದರಿಂದ ಸರ್ವೇಯನ್ನೂ ತ್ವರಿತಗತಿಯಲ್ಲಿ ನಡೆಸಲು ಸಾಧ್ಯವಾಗುವುದಿಲ್ಲ. ಆದಾಗ್ಯೂ ಬೆಳೆಹಾನಿಯಾಗಿರುವ ಬಗ್ಗೆ ಜಂಟಿ ಸಮೀಕ್ಷೆ ನಡೆಸಲು ಸೂಚನೆ ನೀಡಲಾಗಿದ್ದು, ವರದಿ ಬಂದ ನಂತರ ಬೆಳೆ ಪರಿಹಾರವನ್ನು ನೀಡಲಾಗುವುದು ಎಂದರು.