Tuesday, February 18, 2025

ಸತ್ಯ | ನ್ಯಾಯ |ಧರ್ಮ

ಸರಕಾರಿ ಶಾಲೆಯಲ್ಲಿ ಚಿಕ್ಕಿ ವಿತರಣೆ ಸ್ಥಗಿತಗೊಳಿಸಲು ನಿರ್ಧಾರ ?

ಬೆಂಗಳೂರು : ರಾಜ್ಯ ಸರ್ಕಾರದಿಂದ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ತಿನ್ನದ ಮಕ್ಕಳಿಗೆ ನೀಡುತ್ತಿದ್ದ ಚಿಕ್ಕಿ ವಿತರಣೆಯನ್ನು ಸ್ಥಗಿತಗೊಳಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

ಚಿಕ್ಕಿ ತಿಂದು ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾದ ಹಿನ್ನಲೆ ಚಿಕ್ಕಿ ವಿತರಣೆಯನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಿದೆ. ಅಷ್ಟೇ ಅಲ್ಲದೆ ಧಾರವಾಡ, ಕಲಬುರಗಿ ಸೇರಿದಂತೆ ಕೆಲ ಜಿಲ್ಲೆಗಳು ಮಕ್ಕಳಿಗೆ ಚಿಕ್ಕಿಯ ಬದಲಾಗಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ನೀಡಿ ಎಂದು ಮನವಿ ಮಾಡಿದ್ದರು.

ಸರಕಾರಿ ಮತ್ತು ಅನುದಾನಿತ ಶಾಲೆಗಳ ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ವಿತರಿಸುತ್ತಿದ್ದ ಚಿಕ್ಕಿಯಲ್ಲಿ ಕೊಬ್ಬಿನಾಂಶ ಮತ್ತು ಸಕ್ಕರೆ ಅಂಶ ಅಧಿಕವಾಗಿದೆ. ಅಲ್ಲದೇ ಇದನ್ನು ಸಮರ್ಪಕವಾಗಿ ಸಂಗ್ರಹಿಸದೇ ಇರುವುದು ಹಾಗೂ ಅವಧಿ ಮೀರಿದ ಚಿಕ್ಕಿಗಳನ್ನು ಮಕ್ಕಳಿಗೆ ನೀಡುತ್ತಿರುವುದು ಕಂಡು ಬಂದಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page