Home ರಾಜಕೀಯ ಆಂಧ್ರಪ್ರದೇಶ ಬಸ್ ದುರಂತ: ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತೀವ್ರ ಸಂತಾಪ

ಆಂಧ್ರಪ್ರದೇಶ ಬಸ್ ದುರಂತ: ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತೀವ್ರ ಸಂತಾಪ

0

ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯಲ್ಲಿ ನಡೆದ ಬಸ್ ದುರಂತಕ್ಕೆ ರಾಜ್ಯಸಭೆಯ ವಿರೋಧಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ತಮ್ಮ “ಎಕ್ಸ್” ಖಾತೆಯಲ್ಲಿ ಘಟನೆಯ ಕುರಿತಂತೆ ಆಘಾತ ವ್ಯಕ್ತಪಡಿಸಿ ಬರೆದಿರುವ ಅವರು, ಆಂಧ್ರಪ್ರದೇಶದ ಕರ್ನೂಲಿನಲ್ಲಿ ಹೈದರಾಬಾದ್-ಬೆಂಗಳೂರು ಹೆದ್ದಾರಿಯಲ್ಲಿ ಬಸ್ ಬೆಂಕಿಗಾಹುತಿಯಾಗಿ ಅಮೂಲ್ಯ ಜೀವಗಳನ್ನು ಬಲಿತೆಗೆದುಕೊಂಡಿರುವುದು ತೀವ್ರ ದುಃಖಕರವಾಗಿದೆ ಎಂದಿದ್ದಾರೆ.

ಈ ದುರಂತದಲ್ಲಿ ಪ್ರಾಣ ಕಳೆದುಕೊಂಡ ಎಲ್ಲಾ ಪ್ರಯಾಣಿಕರ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಹಾಗೂ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ.

ಪದೇ ಪದೇ ಸಂಭವಿಸುತ್ತಿರುವ ಇಂತಹ ದುರಂತಗಳ ಹೊಣೆಗಾರಿಕೆ ಬಗ್ಗೆ ತಿಳಿದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

You cannot copy content of this page

Exit mobile version