Tuesday, August 12, 2025

ಸತ್ಯ | ನ್ಯಾಯ |ಧರ್ಮ

ಮಾನನಷ್ಟ ಮೊಕದ್ದಮೆ: ಮೇಧಾ ಪಾಟ್ಕರ್‌ಗೆ ಸುಪ್ರೀಂನಲ್ಲಿ ಹಿನ್ನಡೆ

ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ (70) ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನೆಡೆಯಾಗಿದೆ. ಮಾನನಷ್ಟ ಮೊಕದ್ದಮೆಯಲ್ಲಿ ಜುಲೈ 29ರಂದು ದೆಹಲಿ ಹೈಕೋರ್ಟ್ ಅವರನ್ನು ತಪ್ಪಿತಸ್ಥರೆಂದು ಘೋಷಿಸಿ ನೀಡಿದ ತೀರ್ಪಿನಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಆದರೆ ಅವರಿಗೆ ವಿಧಿಸಲಾದ ₹1 ಲಕ್ಷ ದಂಡವನ್ನು ರದ್ದುಗೊಳಿಸಿದೆ.

ಪ್ರಸ್ತುತ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು 2001ರಲ್ಲಿ ಮೇಧಾ ವಿರುದ್ಧ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕಳೆದ ವರ್ಷ ಮೇ ತಿಂಗಳಲ್ಲಿ ಮೇಧಾ ಅವರನ್ನು ತಪ್ಪಿತಸ್ಥರೆಂದು ನಿರ್ಧರಿಸಿ ಮೂರು ತಿಂಗಳ ಜೈಲು ಮತ್ತು ₹1 ಲಕ್ಷ ದಂಡ ವಿಧಿಸಿದ್ದರು.

ಈ ವರ್ಷದ ಏಪ್ರಿಲ್‌ನಲ್ಲಿ ಸೆಷನ್ಸ್ ಕೋರ್ಟ್ ಮೇಧಾ ಅವರನ್ನು ತಪ್ಪಿತಸ್ಥರೆಂದು ಘೋಷಿಸಿದ್ದರೂ, ಜೈಲು ಶಿಕ್ಷೆಯನ್ನು ರದ್ದುಪಡಿಸಿ ಪ್ರೊಬೇಷನ್ ಮೇಲೆ ಬಿಡುಗಡೆ ಮಾಡಲು ಆದೇಶಿಸಿತ್ತು. ದೆಹಲಿ ಹೈಕೋರ್ಟ್ ಈ ತೀರ್ಪನ್ನು ಎತ್ತಿಹಿಡಿದಿತ್ತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page