Home ದೆಹಲಿ ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

0

ದೆಹಲಿ: ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಉತ್ತರಪ್ರದೇಶ ಹಾಗೂ ತಮಿಳುನಾಡುಯ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ರಕ್ಷಣಾ ಕಾರಿಡಾರ್ ಸ್ಥಾಪನೆ ಹಾಗೂ ಟನಲ್ ಯೋಜನೆ , ಬಳ್ಳಾರಿ ರಸ್ತೆಯಲ್ಲಿ ಲಿಂಕ್ ರೋಡ್ ಯೋಜನೆ, ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಯ ನಿರ್ಮಾಣಕ್ಕೆ ಅವಶ್ಯವಿರುವ ಕೇಂದ್ರ ರಕ್ಷಣಾ ಇಲಾಖೆಗೆ ಸೇರಿದ ಜಾಗವನ್ನು ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ನೀಡುವಂತೆ ಕೋರಿ ಮನವಿ ಸಲ್ಲಿಸಿರುವ ಬಗ್ಗೆ ವಿವರಿಸಿದರು.

ರಾಹುಲ್ ಗಾಂಧಿಯನ್ನು ಭೇಟಿಯಾಗುವ ಕಾರ್ಯಕ್ರಮವಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ರಾಹುಲ್ ಗಾಂಧಿಯವರ ಸಮಯವನ್ನು ಸಾಧ್ಯವಾದರೆ ಭೇಟಿಯಾಗುವುದಾಗಿ ತಿಳಿಸಿದರು. ಕಾಂಗ್ರೆಸ್ ನ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ನಾಳೆ ನವದೆಹಲಿಗೆ ಆಗಮಿಸಲಿದ್ದು, ಅವರೊಂದಿಗೆ ವಿಧಾನಪರಿಷತ್ ಸದಸ್ಯರು ಹಾಗೂ ನಿಗಮಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಲಾಗುವುದು. ಅಂತೆಯೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಭೇಟಗೆ ಸಮಯವನ್ನು ಕೋರಲಾಗಿದ್ದು, ನಾಳೆ ಭೇಟಿಯಾಗುವ ಸಾಧ್ಯತೆಯಿದೆ ಎಂದರು.

You cannot copy content of this page

Exit mobile version