ದೆಹಲಿಯ ಅಜಾದ್‌ ಮಾರುಕಟ್ಟೆಯಲ್ಲಿ ಕಟ್ಟಡ ಕುಸಿತ : 5 ಜನರಿಗೆ ಗಾಯ

ದೆಹಲಿ: ರಾಷ್ಟ್ರ ರಾಜಧಾನಿ ಮಾರುಕಟ್ಟೆಯಲ್ಲಿ   ದೆಹಲಿಯ ಅಜಾದ್‌ ಮಾರುಕಟ್ಟೆ ಪ್ರದೇಶದಲ್ಲಿ ಕಟ್ಟಡ ಕುಸಿದಿರುವ ಘಟನೆ ನಡೆದಿದೆ.

ವಿಷಯ ತಿಳಿದ ಕೂಡಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್) ತಂಡವೂ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಕಾರ್ಯಚರಣೆ ಮಾಡುತ್ತಿರುವ ದೃಶ್ಯ

ಈ ಕುರಿತು ಮಾಹಿತಿ ನೀಡಿರುವ ದೆಹಲಿ ಅಗ್ನಿಶಾಮಕ ಸೇವೆ ಸಿಬ್ಬಂದಿ ರವೀಂದರ್ ಸಿಂಗ್, ಸುಮಾರು 6-7 ಕಾರ್ಮಿಕರು ಕುಸಿದಿರುವ ಕಟ್ಟಡದಲ್ಲಿ ಸಿಕ್ಕಿಬಿದ್ದಿದ್ದಾರೆ. ಅದರಲ್ಲಿ  5 ಜನ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು