ಮೈಸೂರು : ದೆಹಲಿಯಲ್ಲಿ (Delhi) ಭೀಕರವಾಗಿ ಸಂಭವಿಸಿದ ಸ್ಫೋಟ (Blast) ಹಿನ್ನೆಲೆಯಲ್ಲಿ ಇಡೀ ರಾಜ್ಯದಲ್ಲೂ ಭದ್ರತೆಯನ್ನು ಬಿಗಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಿಳಿಸಿದರು.ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಜಿಲ್ಲಾ ಕೇಂದ್ರಗಳು, ಬೆಂಗಳೂರು ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ, ಭದ್ರತೆಯನ್ನು ಬಿಗಿಗೊಳಿಸಲು ಸೂಚನೆ ನೀಡಲಾಗಿದೆ ಎಂದರು.ದೆಹಲಿ ಸ್ಪೋಟದಲ್ಲಿ ಕೆಲವರು ಸತ್ತಿರುವ ಬಗ್ಗೆ ಮಾಹಿತಿ ಇದೆ. ಮೈಸೂರು ಪೊಲೀಸರೊಂದಿಗೆ ಈಗಾಗಲೇ ಮಾತನಾಡಿದ್ದು, ರಾಜ್ಯ ಮಟ್ಟದ ಐಜಿಪಿ, ಡಿಜಿಪಿ ಯವರೊಂದಿಗೆ ಕೂಡ ಮಾತನಾಡುತ್ತೇನೆ ಎಂದು ಹೇಳಿದರು.
ಮೃತರ ಕುಟುಂಬದ ವರ್ಗದವರಿಗೆ ಸಂತಾಪ
ಸ್ಪೋಟದಲ್ಲಿ ಮೃತರಾದ ಕುಟುಂಬದವರಿಗೆ ಸಂತಾಪ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಭದ್ರತಾ ಲೋಪವಾಗಿದೆಯೇ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸ್ಪೋಟದ ಬಗ್ಗೆ ಪೂರ್ಣ ಮಾಹಿತಿ ಇಲ್ಲವಾದ್ದರಿಂದ ಈ ಬಗ್ಗೆ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದರು.
ದೆಹಲಿಯ ಭೀಕರ ಸ್ಫೋಟದಲ್ಲಿ 9ಕ್ಕೂ ಹೆಚ್ಚು ಜನ ಸಾ*ವು!?
ನವದೆಹಲಿ: ಕೆಂಪು ಕೋಟೆ (Red Fort) ಸಮೀಪದಲ್ಲಿ ನಿಲ್ಲಿಸಲಾಗಿದ್ದ ಕಾರುಗಳಲ್ಲಿ ಭಾರೀ ಸ್ಫೋಟ (Blast) ಸಂಭವಿಸಿದ ಪರಿಣಾಮ ಘಟನೆಯಲ್ಲಿ ಸುಮಾರ 9ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು.. ಹಲವರು ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾರು, ಆಟೋಗಳು (Auto) ಸೇರಿ ಹತ್ತಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲಾಗಿವೆ. ಇನ್ನು ರಾಷ್ಟ್ರ ರಾಜಧಾನಿಯಲ್ಲಿನ ಈ ಸ್ಫೋಟದ ಬಗ್ಗೆ ಜನ ಬೆಚ್ಚಿ ಬಿದ್ದಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ದೆಹಲಿಯಲ್ಲಿ ಹೈಅಲರ್ಟ್ ಸಹ ಘೋಷಿಸಲಾಗಿದೆ. ಈ ಘಟನೆ ಹೇಗಾಯಿತು? ಇದಕ್ಕೆ ಕಾರಣವೇನು ಎಂಬುವುದರ ಕುರಿತು ಸದ್ಯ ಪೊಲೀಸರು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.ಮೆಟ್ರೋ ಗೇಟ್ ನಂಬರ್ 1ರ ಸಮೀಪದ ಪಾರ್ಕಿಂಗ್ ಸ್ಲಾಟ್ನಲ್ಲಿದ್ದ ಎರಡು ಕಾರುಗಳಲ್ಲಿ ಈ ಸ್ಫೋಟ ಸಂಭವಿಸಿದೆ. ಈ ಕೃತ್ಯದ ಹಿಂದೆ ಉಗ್ರರ ಕೈವಾಡ ಇದೆಯಾ ಎಂಬ ಶಂಕೆಯೂ ವ್ಯಕ್ತವಾಗುತ್ತಿದೆ.
ಕೆಂಪುಕೋಟೆ ಸಮೀಪದಲ್ಲಿ ನಿಲ್ಲಿಸಲಾಗಿದ್ದ 2 ಕಾರುಗಳಲ್ಲಿ ಈ ಅನಾಹುತ ಸಂಭವಿಸಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳದಲ್ಲಿರುವ ಇತರ ವಾಹನಗಳಿಗೂ ಬೆಂಕಿ ವ್ಯಾಪಿಸುತ್ತಿದೆ. ಬೆಂಕಿಯ ಕೆನ್ನಾಲಿಗೆಗೆ ಕಾರುಗಳು ಸುಟ್ಟು ಕರಕಲಾಗಿವೆ. ಸ್ಥಳದಲ್ಲಿ ಬಾಂಬ್ ನಿಷ್ಕ್ರಿಯ ದಳ, NIA ತಂಡ, ಪೊಲೀಸರು ಪರಿಶೀಲನೆ ಮುಂದುವರಿಸಿದ್ದಾರೆ.
ಕೆಮಿಕಲ್ ಬಾಂ*ಬ್ ಬಳಸಿ ದಾಳಿಗೆ ಸಂಚು?
ಗಾಂಧಿನಗರ: ದೇಶದಲ್ಲಿ ದುಷ್ಕೃತ್ಯ ಎಸಗಲು ಉಗ್ರರು ಸಂಚು ರೂಪಿಸಿದ್ದಾರೆ. ಇದೀಗ ಗುಜರಾತಿನ ಗಾಂಧಿನಗರದಲ್ಲಿ ಒಂದು ಖತರ್ನಾಕ್ ಉಗ್ರ ಜಾಲವನ್ನು ಗುಜರಾತ್ (Gujrat) ಉಗ್ರ ನಿಗ್ರಹ ದಳದ ಅಧಿಕಾರಿಗಳು ಬೇಧಿಸಿದ್ದಾರೆ. ಮೂವರು ಉಗ್ರರನ್ನು (Terrorist Arrest) ಬಂಧಿಸಿದ್ದಾರೆ.
