ದೆಹಲಿ ಸರ್ಕಾರದ ಹೊಸ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ಅರವಿಂದ್ ಕೇಜ್ರಿವಾಲ್ ಗೆ ತಿಹಾರ್ ಜೈಲಿಗೆ ಹಾಕಲಾಗಿತ್ತು.
ಹೆಚ್ಚಿನ ತನಿಖೆಗಾಗಿ ಸಿಬಿಐ, ಅರವಿಂದ್ ಕೇಜ್ರಿವಾಲ್ ಅವರನ್ನು ಕಸ್ಟಡಿಗೆ ಕೇಳಿತ್ತು. ತಿಹಾರ್ ಜೈಲಿನಿಂದ ಕೇಜ್ರಿವಾಲ್ ಅವರನ್ನು ವಶಕ್ಕೆ ಪಡೆದ ಸಿಬಿಐ ಅಧಿಕಾರಿಗಳು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಿ ಮೂರು ದಿನಗಳ ಕಸ್ಟಡಿಗೆ ಪಡೆದಿದ್ದರು. ಇಂದು ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಮತ್ತೆ ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು.
ಈ ವೇಳೆ ನ್ಯಾಯಾಲಯ ಅರವಿಂದ್ ಕೇಜ್ರಿವಾಲ್ ಅವರನ್ನು ಜುಲೈ 12ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶ ಹೊರಡಿಸಿದೆ.