ಅಬಕಾರಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನವನ್ನು ಮೇ 20ರವರೆಗೆ ವಿಸ್ತರಿಸಿದ ದೆಹಲಿ ಕೋರ್ಟ್

ಆಪಾದಿತ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಮಂಗಳವಾರ ದೆಹಲಿ ನ್ಯಾಯಾಲಯವು ಮೇ 20ರವರೆಗೆ ವಿಸ್ತರಿಸಿದೆ.

ಕೇಜ್ರಿವಾಲ್ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಸಿಬಿಐ ಮತ್ತು ಇಡಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಕಸ್ಟಡಿಯನ್ನು ಮೇ 20ರವರೆಗೆ ವಿಸ್ತರಿಸಿದರು.

ಸಹ-ಆರೋಪಿ ಚನ್‌ಪ್ರೀತ್ ಸಿಂಗ್‌ ಅವರ ನ್ಯಾಯಾಂಗ ಬಂಧನವನ್ನು ಸಹ ಮೇ 20ರವರೆಗೆ ನ್ಯಾಯಾಧೀಶರು ವಿಸ್ತರಿಸಿದರು.

Related Articles

ಇತ್ತೀಚಿನ ಸುದ್ದಿಗಳು