Home ಇನ್ನಷ್ಟು ಕೋರ್ಟು - ಕಾನೂನು ದೆಹಲಿ ಗಲಭೆ ಪ್ರಕರಣ: ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯ ಆರೈಕೆಗಾಗಿ ಉಮರ್ ಖಾಲಿದ್ ಸಲ್ಲಿಸಿದ್ದ ಜಾಮೀನು ಅರ್ಜಿ...

ದೆಹಲಿ ಗಲಭೆ ಪ್ರಕರಣ: ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯ ಆರೈಕೆಗಾಗಿ ಉಮರ್ ಖಾಲಿದ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ

0

ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಯ ಆರೈಕೆ ಹಾಗೂ ಇತ್ತೀಚೆಗಷ್ಟೇ ನಿಧನರಾದ ತಮ್ಮ ಚಿಕ್ಕಪ್ಪನವರ 40ನೇ ದಿನದ ಪುಣ್ಯತಿಥಿ (ಚೆಹ್ಲಮ್) ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲು ತಮಗೆ 15 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಬೇಕು ಎಂದು ಕೋರಿ ಉಮರ್ ಖಾಲಿದ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅವರ ತಾಯಿಯವರು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿರುವುದರಿಂದ ಅವರ ಜೊತೆ ಇರಲು ಈ ರಜೆ ಕೋರಲಾಗಿತ್ತು. ಆದರೆ ಈ ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಮೀರ್ ಬಾಜಪೇಯಿ ಅವರ ಪೀಠವು ಜಾಮೀನು ನೀಡಲು ನಿರಾಕರಿಸಿ ಅರ್ಜಿಯನ್ನು ವಜಾಗೊಳಿಸಿದೆ.

ಕಳೆದ ಕೆಲವು ದಿನಗಳ ಹಿಂದಷ್ಟೇ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠವು, ಯುಎಪಿಎ (UAPA) ಪ್ರಕರಣಗಳಲ್ಲಾದರೂ ‘ಜಾಮೀನು ಎನ್ನುವುದು ನಿಯಮ’ ಎಂದು ಹೇಳುತ್ತಾ, ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರಿಗೆ ಸುಪ್ರೀಂಕೋರ್ಟ್‌ನ ಮತ್ತೊಂದು ಪೀಠವು ಜಾಮೀನು ನಿರಾಕರಿಸಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. ಆದರೆ ಈ ನಡುವೆಯೇ ದೆಹಲಿ ನ್ಯಾಯಾಲಯವು ಉಮರ್ ಖಾಲಿದ್ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆ (CAA) ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ (NRC) ವಿರುದ್ಧ ನಡೆದ ವ್ಯಾಪಕ ಪ್ರತಿಭಟನೆಗಳ ಸಂದರ್ಭದಲ್ಲಿ ಭುಗಿಲೆದ್ದಿದ್ದ ೨೦೨೦ ರ ದೆಹಲಿ ಗಲಭೆಯ ಹಿಂದೆ ಉಮರ್ ಖಾಲಿದ್ ಮತ್ತು ಇತರರು ಮಾಸ್ಟರ್‌ಮೈಂಡ್ ಆಗಿದ್ದರು ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಭಯೋತ್ಪಾದನಾ ನಿರೋಧಕ ಕಾಯ್ದೆಯಾದ ಯುಎಪಿಎ (UAPA) ಮತ್ತು ಭಾರತೀಯ ದಂಡ ಸಂಹಿತೆಯ (IPC) ವಿವಿಧ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಜೈಲಿನಲ್ಲಿ ಇರಿಸಲಾಗಿದೆ.

You cannot copy content of this page

Exit mobile version