Home ದೇಶ ದ್ವೇಷ ಭಾಷಣ ಆರೋಪ: ಬಿಜೆಪಿ ಮುಖಂಡರಾದ ಕಪಿಲ್ ಮಿಶ್ರಾ, ಪ್ರವೇಶ್ ವರ್ಮಾ ವಿರುದ್ಧ ಎಫ್‌ಐಆರ್ ಕೋರಿದ್ದ...

ದ್ವೇಷ ಭಾಷಣ ಆರೋಪ: ಬಿಜೆಪಿ ಮುಖಂಡರಾದ ಕಪಿಲ್ ಮಿಶ್ರಾ, ಪ್ರವೇಶ್ ವರ್ಮಾ ವಿರುದ್ಧ ಎಫ್‌ಐಆರ್ ಕೋರಿದ್ದ ಅರ್ಜಿ ವಜಾ

0

ದೆಹಲಿ: 2019 ರ ಜಾಮಿಯಾ ಹಿಂಸಾಚಾರ ಹಾಗೂ 2020 ರ ಈಶಾನ್ಯ ದೆಹಲಿ ಗಲಭೆಗೆ ಪ್ರಚೋದನೆ ನೀಡಿದ ದ್ವೇಷ ಭಾಷಣದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರಾದ ಕಪಿಲ್ ಮಿಶ್ರಾ, ಮಾಜಿ ಸಂಸದ ಪ್ರವೇಶ್ ವರ್ಮಾ ಮತ್ತು ಇತರರ ವಿರುದ್ಧ ಕ್ರಿಮಿನಲ್ ಪ್ರಕರಣ (ಎಫ್‌ಐಆರ್) ದಾಖಲಿಸಲು ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.

ದೆಹಲಿ ಗಲಭೆಯ ಸಂದರ್ಭದಲ್ಲಿ ಈ ಮುಖಂಡರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ ಹಿಂಸಾಚಾರಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಕಾನೂನು ಕ್ರಮಕ್ಕೆ ಅರ್ಜಿದಾರರು ಕೋರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಎಫ್‌ಐಆರ್ ದಾಖಲಿಸಲು ನಿರ್ದೇಶನ ನೀಡಲು ನಿರಾಕರಿಸಿ ಅರ್ಜಿಯನ್ನು ತಿರಸ್ಕರಿಸಿದೆ.

ಇದಕ್ಕೂ ಮುನ್ನ, 2026 ರ ಮಾರ್ಚ್‌ನಲ್ಲಿ ದೆಹಲಿಯ ಹೆಚ್ಚುವರಿ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಪಿಲ್ ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶಿಸಲು ನಿರಾಕರಿಸಿತ್ತು. ಆದರೆ ಆ ಅರ್ಜಿಯನ್ನು ಸಂಪೂರ್ಣವಾಗಿ ತಿರಸ್ಕರಿಸದೆ, ಅದನ್ನು ಖಾಸಗಿ ದೂರು ಎಂದು ಪರಿಗಣಿಸಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಅಡಿಯಲ್ಲಿ ಸಾಕ್ಷ್ಯಾಧಾರಗಳನ್ನು ಸಲ್ಲಿಸಲು ದೂರುದಾರರಿಗೆ ಅವಕಾಶ ನೀಡಿತ್ತು. ಆ ಸಂದರ್ಭದಲ್ಲಿ ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ವರದಿ ಸಲ್ಲಿಸಿ, ಕಪಿಲ್ ಮಿಶ್ರಾ ಅವರನ್ನು ಗಲಭೆ ಪ್ರಕರಣದಲ್ಲಿ ಸುಳ್ಳಾಗಿ ಸಿಲುಕಿಸಲು ಯತ್ನಿಸಲಾಗುತ್ತಿದೆ ಎಂದು ವಾದಿಸಿದ್ದರು.

ಹಾಗೆಯೇ ನವೆಂಬರ್ 2025 ರಲ್ಲಿ, ಕಪಿಲ್ ಮಿಶ್ರಾ ವಿರುದ್ಧ ಹೆಚ್ಚಿನ ತನಿಖೆಗೆ ಆದೇಶಿಸಿದ್ದ ಮ್ಯಾಜಿಸ್ಟ್ರೇಟ್ ಅವರ ಹಿಂದಿನ ಆದೇಶವನ್ನು ದೆಹಲಿಯ ಸೆಷನ್ಸ್ ನ್ಯಾಯಾಲಯವು ರದ್ದುಗೊಳಿಸಿತ್ತು. ಪ್ರಮುಖ ಗಲಭೆ ಪಿತೂರಿ ಪ್ರಕರಣವು ಈಗಾಗಲೇ ವಿಶೇಷ ನ್ಯಾಯಾಲಯದ ಮುಂದೆ ಬಾಕಿ ಇರುವಾಗ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸುವುದು ಕಾನೂನುಬಾಹಿರ ಎಂದು ವಿಶೇಷ ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದರು. ಇದೀಗ ದ್ವೇಷ ಭಾಷಣದ ಕುರಿತು ಪ್ರತ್ಯೇಕವಾಗಿ ಸಲ್ಲಿಕೆಯಾಗಿದ್ದ ಅರ್ಜಿಯನ್ನೂ ಹೈಕೋರ್ಟ್ ವಜಾಗೊಳಿಸು

You cannot copy content of this page

Exit mobile version