Sunday, July 27, 2025

ಸತ್ಯ | ನ್ಯಾಯ |ಧರ್ಮ

ದೆಹಲಿ ಎಂಸಿಡಿ ಚುನಾವಣೆ: ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿದ ಆಮ್ ಆದ್ಮಿ ಪಕ್ಷ

ನವದೆಹಲಿ:  ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಗಾಗಿ ನಡೆದ ಪ್ರತಿಷ್ಠಿತ ಹೋರಾಟದಲ್ಲಿ ಜಯಗಳಿಸಿರುವ ಆಮ್ ಆದ್ಮಿ ಪಕ್ಷವು (ಎಎಪಿ), ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿದೆ.

250 ವಾರ್ಡ್‌ಗಳಲ್ಲಿ ಎಎಪಿ 134, ಬಿಜೆಪಿ 103, ಕಾಂಗ್ರೆಸ್‌ 10, ಇತರೆ 3 ವಾರ್ಡ್‌ಗಳಲ್ಲಿ ಜಯಗಳಿಸಿವೆ. ಈ ಹಿನ್ನೆಲೆಯಲ್ಲಿ ಎಎಪಿ ಪಕ್ಷವು ಅತೀ ಹೆಚ್ಚು ವಾರ್ಡ್‌ಗಳಲ್ಲಿ ಜಯಗಳಿಸುವ ಮೂಲಕ ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿ, ಗೆಲುವಿನ ಸಂಭ್ರಮ ಆಚರಿಸಿದೆ.

ತ್ರಿಕೋನ ಸ್ಪರ್ಧೆ ಎಂದು ಪರಿಗಣಿಸಲಾಗಿದ್ದ ಎಂಸಿಡಿ ಚುನಾವಣೆಯಲ್ಲಿ ಎಎಪಿ ಮೊದಲನೇ ಸ್ಥಾನ ಪಡೆದುಕೊಂಡಿದ್ದು, ಬಿಜೆಪಿ ಎರಡನೇ ಸ್ಥಾನ ಪಡೆದುಕೊಂಡಿದೆ. ಇನ್ನು ಮೂರನೇ ಸ್ಥಾನವನ್ನು ಕಾಂಗ್ರೆಸ್‌ ಪಡೆದು ಕೊಂಡಿದ್ದು, ಈ ತ್ರಿಕೋನ ಸ್ಪರ್ಧೆಯಲ್ಲಿ ಎಎಪಿ ಗೆಲುವನ್ನು ತನ್ನದಾಗಿಸಿಕೊಂಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page