Thursday, July 24, 2025

ಸತ್ಯ | ನ್ಯಾಯ |ಧರ್ಮ

ಓವೈಸಿ ಮನೆ ಮೇಲೆ ದಾಳಿಗೆ ಎಫ್‌ಐಆರ್ ದಾಖಲಿಸಿದ ದೆಹಲಿ ಪೊಲೀಸರು

ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ನಿವಾಸದ ನಾಮಫಲಕಕ್ಕೆ ಅಪರಿಚಿತ ದುಷ್ಕರ್ಮಿಗಳು ಕಪ್ಪು ಮಸಿ ಬಳಿದ ನಂತರ ಕೇಳಿ ಬಂದ ವ್ಯಾಪಕ ಆಕ್ರೋಶದ ನಂತರ ದೆಹಲಿ ಪೊಲೀಸರು ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಗುರುವಾರ ಸಂಜೆ ಈ ಘಟನೆ ನಡೆದಿದ್ದು, ಅಪರಿಚಿತ ದುಷ್ಕರ್ಮಿಗಳು ನಾಮಫಲಕಕ್ಕೆ ಕಪ್ಪು ಮಸಿ ಬಳಿದು ಅಶೋಕ ರಸ್ತೆಯ ಓವೈಸಿ ಅವರ ಮನೆಯ ಹೊರಗೆ ಇಸ್ರೇಲ್ ಪರ ಪೋಸ್ಟರ್‌ಗಳನ್ನು ಹಾಕಿದ್ದಾರೆ.

ಭಾರತೀಯ ದಂಡ ಸಂಹಿತೆ (IPC) 143 (ಕಾನೂನುಬಾಹಿರ ಸಭೆ), 147 (ಗಲಭೆ), 506 (ಕ್ರಿಮಿನಲ್ ಬೆದರಿಕೆ), ಮತ್ತು 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆಯನ್ನು ನೀಡುವುದು) ಸೇರಿದಂತೆ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳನ್ನು ಗುರುತಿಸಲು ಪೊಲೀಸರು ಸದ್ಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸಂಸದ ಓವೈಸಿ “ಇದೊಂದು ಸಾವರ್ಕರ್‌ ಮಾದರಿಯ ಹೇಡಿತನದ ವರ್ತನೆ” ಎಂದು ಬಣ್ಣಿಸಿದ್ದಾರೆ. “ನನ್ನ ಮನೆಯನ್ನು ಗುರಿಯಾಗಿರಿಸಿಕೊಳ್ಳುವ ಎರಡು-ಬಿಟ್ ಗೂಂಡಾಗಳಿಗೆ: ಇದು ನನಗೆ ಹೆದರಿಕೆಯಿಲ್ಲ. ಈ ಸಾವರ್ಕರ್ ಮಾದರಿಯ ಹೇಡಿತನದ ನಡವಳಿಕೆಯನ್ನು ನಿಲ್ಲಿಸಿ ಮತ್ತು ನನ್ನನ್ನು ನೇರವಾಗಿ ಎದುರಿಸುವಷ್ಟು ಗಂಡಸರಾಗಿರಿ. ಸ್ವಲ್ಪ ಮಸಿ ಎಸೆದ ನಂತರ ಅಥವಾ ಕೆಲವು ಕಲ್ಲುಗಳನ್ನು ಎಸೆದ ನಂತರ ಓಡಿಹೋಗಬೇಡಿ,” ಎಂದು ಸಂಸದ ಓವೈಸಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page