ದೆಹಲಿ : ಮಹಾಕುಂಭ ಮೇಳ ನಡೆಯುತ್ತಿರುವ ಪ್ರಯಾಗರಾಜ್‌ಗೆ ದಿಲ್ಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಹೊರಟ ಜನರ ನೂಕುನುಗ್ಗಲಿನಿಂದ ಕಾಲ್ತುಳಿತ ಸಂಭವಿಸಿ ಮಕ್ಕಳು ಸೇರಿ 20 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಮತ್ತು ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವುದ ಎಲ್ಲರನ್ನು ಆತಂಕ್ಕ್ಕೀಡುಮಾಡಿದೆ.

ಶನಿವಾರ ಸಂಜೆ ನವದೆಹಲಿ ರೈಲು ನಿಲ್ದಾಣದಲ್ಲಿ (New Delhi Railway Station) ಕಾಲ್ತುಳಿತ ಸಂಭವಿಸಿದ್ದು, ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಹದಿನೈದು ಜನರು ಪ್ರಾಣ ಕಳೆದುಕೊಂಡಿದ್ದಾರೆ. 15-20 ನಿಮಿಷಗಳ ಅವಧಿಯಲ್ಲಿ ನೂರಾರು ಪ್ರಯಾಣಿಕರು 13 ಮತ್ತು 14 ನೇ ಪ್ಲಾಟ್‌ಫಾರ್ಮ್‌ಗಳಲ್ಲಿ (Platforms) ಹಠಾತ್ ಜಮಾಯಿಸಿದ ನಂತರ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದೆ. ಗಾಯಾಳುಗಳನ್ನು ತಕ್ಷಣವೇ ಎಲ್‌ಎನ್‌ಜೆಪಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ರೈಲು ನಿಲ್ದಾಣದ ಅಧಿಕಾರಿಗಳು ಅಗ್ನಿ ಶಾಮಕ ದಳದ ಹೆಚ್ಚುವರಿ ತುಕಡಿಗಳನ್ನು ಕರೆಸಿಕೊಂಡು ಪರಿಸ್ಥಿತಿ ನಿಯಂತ್ರಿಸಲು ಶ್ರಮಿಸಿದರು. ಘಟನೆಯ ತೀವ್ರತೆಯ ಮಾಹಿತಿ ಪಡೆದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ತುಕಡಿಗಳೂ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡವು. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಸಂತ್ರಸ್ತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ರೈಲ್ವೆ ಪೊಲೀಸರಿಗೆ ಅಗತ್ಯ ತುರ್ತು ಕ್ರಮ ಜರುಗಿಸಲು ಸೂಚನೆ ನೀಡಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೂಡ ಲೆಫ್ಟಿನೆಂಟ್ ಗವರ್ನರ್ ಅವರಿಂದ ಮಾಹಿತಿ ಪಡೆದು, ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.
ಸ್ಥಳದಲ್ಲಿ 10 ಆಂಬ್ಯುಲೆನ್ಸ್ ಹಾಗೂ ಅಗ್ನಿ ಶಾಮಕ ವಾಹನಗಳು ಬೀಡುಬಿಟ್ಟಿವೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಉತ್ತರ ರೈಲ್ವೆ ಹೇಳಿದೆ. ಘಟನೆ ಬಳಿಕ, ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಪ್ರಯಾಗರಾಜ್‌ಗೆ ನಾಲ್ಕು ವಿಶೇಷ ರೈಲುಗಳನ್ನು ಓಡಿಸುವುದಾಗಿ ಉತ್ತರ ರೈಲ್ವೆ ಘೋಷಿಸಿದೆ.