Tuesday, January 27, 2026

ಸತ್ಯ | ನ್ಯಾಯ |ಧರ್ಮ

ದೆಹಲಿ ಕಾಲ್ತುಳಿತ ಮೃತರ ಸಂಖ್ಯೆ ಬಹಿರಂಗಪಡಿಸಿ – ಮಲ್ಲಿಕಾರ್ಜುನ ಖರ್ಗೆ

ದೆಹಲಿ : ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದ ಘಟನೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕರು ಮೃತರ ಒಟ್ಟು ಸಂಖ್ಯೆಯನ್ನು ತಕ್ಷಣ ಬಹಿರಂಗಪಡಿಸುವಂತೆ ಅಗ್ರಹಿಸುತ್ತಿದ್ದಾರೆ.

‘ಮೃತರ ಮತ್ತು ಗಾಯಗೊಂಡವರ ಸಂಖ್ಯೆಯನ್ನು ಆದಷ್ಟು ಬೇಗ ಘೋಷಿಸಬೇಕು ಮತ್ತು ಕಾಣೆಯಾದವರ ಸಂಖ್ಯೆಯನ್ನೂ ಬಹಿರಂಗಪಡಿಸಿ. ಸಂತ್ರಸ್ತರ ಕುಟುಂಬಗಳಿಗೆ ನಮ್ಮ ಸಂತಾಪಗಳು. ಗಾಯಗೊಂಡವರಿಗೆ ತಕ್ಷಣ ವೈದ್ಯಕೀಯ ಚಿಕಿತ್ಸೆ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.

ಘಟನೆಯ ಬಗ್ಗೆ ಪೋಸ್ಟ್‌ ಹಂಚಿಕೊಂಡಿರುವ ಮಲ್ಲಿಕಾರ್ಜುನ ಖರ್ಗೆ, ‘ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತದಲ್ಲಿ ಅನೇಕ ಜನರು ಸಾವನ್ನಪ್ಪಿದ ಸುದ್ದಿ ಅತ್ಯಂತ ದುಃಖಕರವಾಗಿದೆ. ನಿಲ್ದಾಣದಿಂದ ಬರುವ ವಿಡಿಯೊಗಳು ಹೃದಯ ವಿದ್ರಾವಕವಾಗಿವೆ. ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆಯನ್ನು ಮರೆಮಾಚುವ ನರೇಂದ್ರ ಮೋದಿ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದಿದ್ದಾರೆ

Related Articles

ಇತ್ತೀಚಿನ ಸುದ್ದಿಗಳು

You cannot copy content of this page