Home ದೆಹಲಿ ವಸತಿ ಕಟ್ಟಡದಲ್ಲಿ ಬಿಂಕಿ ಅವಘಡ: 9 ಮಂದಿ ಸಾವು, ನಾಲ್ವರಿಗೆ ಗಾಯ

ವಸತಿ ಕಟ್ಟಡದಲ್ಲಿ ಬಿಂಕಿ ಅವಘಡ: 9 ಮಂದಿ ಸಾವು, ನಾಲ್ವರಿಗೆ ಗಾಯ

0

ದೆಹಲಿಯ ವಿವೇಕ್ ವಿಹಾರ್‌ನಲ್ಲಿ ಭಾನುವಾರ ಮುಂಜಾನೆ ನಾಲ್ಕು ಅಂತಸ್ತಿನ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಒಂಬತ್ತು ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಪ್ರಾಥಮಿಕ ಸಾಕ್ಷ್ಯಗಳ ಪ್ರಕಾರ, ಎಸಿ (AC) ಸ್ಫೋಟದ ಕಾರಣದಿಂದಾಗಿ ಬೆಂಕಿ ಹತ್ತಿಕೊಂಡಿರಬಹುದು ಎಂದು ತಿಳಿದುಬಂದಿದೆ. ಅಗ್ನಿ ಅವಘಡದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ 12 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿವೆ. ಮೃತಪಟ್ಟ ಒಂಬತ್ತು ಮಂದಿಯಲ್ಲಿ ಐದು ಮೃತದೇಹಗಳು ಕಟ್ಟಡದ ಎರಡನೇ ಅಂತಸ್ತಿನಲ್ಲಿ ಪತ್ತೆಯಾಗಿವೆ. ಉಳಿದ ಮೂರು ಮೃತದೇಹಗಳು ಮೆಟ್ಟಿಲುಗಳ ಮೇಲೆ ಮತ್ತು ಇನ್ನೊಬ್ಬ ವ್ಯಕ್ತಿಯ ಮೃತದೇಹ ಮೊದಲ ಮಹಡಿಯಲ್ಲಿ ಕಂಡುಬಂದಿದೆ.

ಮೃತರಲ್ಲಿ ಒಂದು ವರ್ಷದ ಮಗು ಕೂಡ ಸೇರಿದೆ. ಈ ಘಟನೆಯಲ್ಲಿ ನಾಲ್ವರು ಪುರುಷರು, ನಾಲ್ವರು ಮಹಿಳೆಯರು ಮತ್ತು ಒಂದು ಮಗು ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಟ್ಟಡದಲ್ಲಿದ್ದ ಹನ್ನೆರಡಕ್ಕೂ ಹೆಚ್ಚು ನಿವಾಸಿಗಳನ್ನು ರಕ್ಷಿಸಲಾಗಿದೆ ಎಂದು ಪರಿಹಾರ ಕಾರ್ಯಾಚರಣೆ ಸಿಬ್ಬಂದಿ ಹೇಳಿದ್ದಾರೆ. ಬೆಂಕಿಯು ಕಟ್ಟಡದ ಎರಡು, ಮೂರು ಮತ್ತು ನಾಲ್ಕನೇ ಮಹಡಿಗಳಿಗೆ ವ್ಯಾಪಿಸಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

You cannot copy content of this page

Exit mobile version