Friday, June 14, 2024

ಸತ್ಯ | ನ್ಯಾಯ |ಧರ್ಮ

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹ : ಉದ್ಯೋಗ ಆಕಾಂಕ್ಷಿಗಳ ಒಕ್ಕೂಟದಿಂದ ಪ್ರತಿಭಟನೆ

ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ 2.5 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ, ರಾಜ್ಯ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳ ಒಕ್ಕೂಟದ ಸದಸ್ಯರು ಮತ್ತು ನೂರಾರು ಪದವೀಧರರು ನಗರದ ಪ್ರೀಡಂ ಪಾರ್ಕ್‌ನಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಸರ್ಕಾರಿ ಉದ್ಯೋಗಗಳು ಖಾಲಿ ಇದ್ದು, ಸರ್ಕಾರವು  ಅವುಗಳನ್ನು ಭರ್ತಿ ಮಾಡುವಲ್ಲಿ ಕ್ರಮ ಕೈಗೊಂಡಿಲ್ಲ. ಹಾಗೂ ಸರ್ಕಾರವು ಸರ್ಕಾರಿ ಉದ್ಯೋಗಗಳ ಭರ್ತಿಯಲ್ಲಿ ಸಂಪೂರ್ಣವಾಗಿ ವಿಫಲಗೊಂಡಿದ್ದು, ನಡೆದಿರುವ ನೇಮಕಾತಿ ಪರೀಕ್ಷೆಗಳಲ್ಲಿ ವ್ಯಾಪಕವಾಗಿ ಹಗರಣಗಳು ಬೆಳಕಿಗೆ ಬಂದಿವೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ರಾಜ್ಯದಲ್ಲಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಹಗರಣದಿಂದಾಗಿ ರಾತ್ರಿ ಹಗಲೆನ್ನದೆ ಕಷ್ಟಪಟ್ಟು ಓದಿದವರ ಶ್ರಮ ವ್ಯಯವಾಗುತ್ತಿದ್ದು, ಎಷ್ಟೋ ಪಧವೀಧರರು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಮತ್ತು ಕೆಲವರು ಸರ್ಕಾರಿ ಉದ್ಯೋಗಗಳಿಗೆ ಇರಬೇಕಾದ ಅರ್ಹತಾ ವಯೋಮಿತಿ ದಾಟಿ ನಿರುದ್ಯೋಗಿಗಳ ಪಟ್ಟಿಯಲ್ಲಿ ಸೇರುತ್ತಿದ್ದಾರೆ ಎಂದು  ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಈ ಹಿನ್ನಲೆ ಸರ್ಕಾರ ಸರ್ಕಾರಿ ಉದ್ಯೋಗಗಳಿಗೆ ಇರಬೇಕಾದ ಅರ್ಹಾತಾ ವಯೋಮಿತಿಯನ್ನು ಹೆಚ್ಚಿಸಬೇಕು ಮತ್ತು  ಹಗರಣಗಳಲ್ಲಿ ಭಾಗಿಯಾಗಿರುವವರ ವಿರುದ್ಧ ರಾಜಸ್ಥಾನದ ಮಾದರಿಯಲ್ಲಿ ಕ್ರಮ ಕೈಗೊಳ್ಳಬೇಕು ಹಾಗೂ ಪಿಎಸ್‌ಐ ನೇಮಕಾತಿ ಅಕ್ರಮದ ತನಿಖೆ ಶೀಘ್ರವೇ ಪೂರ್ಣಗೊಳಿಸಿ, 545 ಹುದ್ದೆಗಳಿಗೆ ಮರು ಪರೀಕ್ಷೇ ನಡೆಸಬೇಕು.ಕೆಪಿಎಸ್ಸಿ, ಕೆಎಸ್‌ಪಿ, ಕೆಇಎ ನಡೆಸುವ ಪರೀಕ್ಷೆಗಳಲ್ಲಿ ತಾತ್ಕಾಲಿಕ ವೇಳಾಪಟ್ಟಿಯನ್ನು ಅಧಿಸೂಚನೆಯೊಂದಿಗೆ ಪ್ರಕಟಿಸಬೇಕು ಎಂದು ಆಗ್ರಹಿಸಿದರು.

Related Articles

ಇತ್ತೀಚಿನ ಸುದ್ದಿಗಳು