Thursday, December 19, 2024

ಸತ್ಯ | ನ್ಯಾಯ |ಧರ್ಮ

ವೇತನ ಹೆಚ್ಚಳ ಇತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿಸಿಐಟಿಯು ನೇತೃತ್ವದಲ್ಲಿ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ

ಹಾಸನ: ಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯತ್ ಗೆ ಮನವಿ ಸಲ್ಲಿಸಿದರು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದ ಮೂಲಕ ಜಿಲ್ಲಾ ಪಂಚಾಯತ್ ಆವರಣಕ್ಕೆ ಬಂದ ಅವರು, ಇದೆ ವೇಳೆ ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ್ ಮಾತನಾಡಿ, ಮಧ್ಯಾಹ್ನದ ಬಿಸಿಯೂಟ ಯೋಜನೆ ಪ್ರಾರಂಭವಾಗಿ ೨೪ ವರ್ಷಗಳು ಕಳೆಯುತ್ತಿದೆ. ಲಕ್ಷಾಂತರ ಮಕ್ಕಳಿಗೆ ಹಾಲು ನೀಡಿ, ಶಾಲಾ ಸ್ವಚ್ಛತೆ ಮಾಡಿ, ಬಿಸಿ ಬಿಸಿ ಆಹಾರ ನೀಡಿ, ಶಾಲೆಯಲ್ಲಿ ನೀಡುವ ದಿನನಿತ್ಯದ ಎಲ್ಲಾ ಕೆಲಸ ಮಾಡಿ, ಶೈಕ್ಷಣಿಕ ಆಸಕ್ತಿ ಮೂಡಿಸುವಲ್ಲಿ ತಾಯ್ತತನದ ಪ್ರೀತಿ ನೀಡುವ ಪರಿಶ್ರಮ ಕೆಲಸವಾಗಿದೆ. ಪ್ರತಿಯೊಂದು ಮಗುವು ಶಿಕ್ಷಣ ಕಲಿಯಬೇಕೆಂಬ ಮಹತ್ವದ ಉದ್ದೇಶದಿಂದ ೧೯೬೮ ರಲ್ಲಿ ಮೊದಲ ಶಿಕ್ಷಣ ನೀತಿ ಜಾರಿಗೆ ಬಂದಿದೆ. ಇದರ ಕರ್ತವ್ಯದ ಭಾಗವಾಗಿ ಬಿಸಿಯೂಟ ನೀಡುವ ಮೂಲಕ ಜಾರಿಯಲ್ಲಿದೆ. ದೇಶದ ಅಭಿವೃದ್ದಿಗೆ ಪೂರಕವಾದ ಮಕ್ಕಳ ಅಪೌಷ್ಟಿಕತೆಯಿಂದ ಹೊಗಲಾಡಿಸಿ, ಏಕಾಗ್ರತೆಯಿಂದ ಶಿಕ್ಷಣ ಪಡೆಯಲು, ಅರ್ಧದಲ್ಲಿ ಶಾಲೆಯನ್ನು ಬಿಡುವ ಕ್ರಮ ನಿಲ್ಲಿಸಲು ಮಧ್ಯಾಹ್ನದ ಉಪಾಹಾರ ಯೋಜನೆಯನ್ನು ಅಂದಿನಿAದ ಇಂದಿನವರೆಗೆ ಸಮಗ್ರವಾಗಿ ನಡೆಸಿಕೊಂಡು ಬಂದಿದೆ ಎಂದರು. ಈ ಯೋಜನೆ ದೇಶದ ಮಹತ್ವದ ಯೊಜನೆಯಾಗಿ ದೇಶದಾದ್ಯಂತ ಮುಂದುವರಿದಿದೆ. ಈ ಯೋಜನೆಯ ಮಹತ್ವವನ್ನು ಅರಿತು ಉತ್ತರಪ್ರದೇಶ ಮತ್ತು ಪಂಜಾಬ್ ರಾಜ್ಯದಲ್ಲಿ ಮಾನ್ಯ ಹೈಕೊರ್ಟ ವರ್ಷದ ೧೨ ತಿಂಗಳು ಕೆಲಸ ಹಾಗೂ ಕನಿಷ್ಟಕೂಲಿ ನೀಡಲು ಆದೇಶಿಸಿದೆ. ೨೦೧೪ ರ ನಂತರ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳ ಪರಿಕಲ್ಪನೆ ಬದಲಾಗಿ ನೀತಿ ಆಯೋಗದ ಶಿಪಾರಸ್ಸುಗಳಂತೆ ೬೦:೪೦ ರ ಅನುಪಾತದ ಆಧಾರದಲ್ಲಿ ಕೇಂದ್ರ ಸರ್ಕಾರ ತನ್ನ ಮೂಲ ಜವಾಬ್ದಾರಿಯಿಂದ ನುಣುಚಿಕೊಂಡು ಬಜೆಟ್‌ನಲ್ಲಿ ಅನುದಾನಗಳನ್ನು ನಿರಂತರವಾಗಿ ಕಡಿಮೆ ಮಾಡುತ್ತಿದೆ. ಬಿಸಿಯೂಟ ಯೋಜನೆ ಕೊಡಲಾದ ಸಾದಿಲ್ವಾರು ವೆಚ್ಛ, ಅಡುಗೆ ಗುಣಮಟ್ಟದ ವೆಚ್ಛ, ೨೦೧೪ ರಿಂದಲೂ ಹೆಚ್ಚಳ ಮಾಡದೇ ಅನುದಾನದಲ್ಲಿ ವರ್ಷದಿಂದ ವರ್ಷಕ್ಕೆ ಕಡಿತ ಮಾಡುತ್ತಿದೆ. ಮಾತ್ರವಲ್ಲದೇ ಈ ಯೋಜನೆಯ ಹೆಸರನ್ನು ಬದಲಾಯಿಸಿದೆ. ತನ್ನ ಪಾಲಿನ ನಿಧಿಯನ್ನು ಕಡಿತಗೊಳಿಸಿ ರಾಜ್ಯದ ಪಾಲನ್ನು ಕೊಡಬೇಕು ಎಂಬ ನೀತಿಯನ್ನು ಅನುಸರಿಸಿದ್ದರಿಂದ ಯೋಜನೆಯನ್ನು ಬಲಿಷ್ಠ ಪಡಿಸುವ ಜವಾಬ್ದಾರಿ ನನ್ನದು ಅಷ್ಟೇ ಅಲ್ಲ ಎಂದು ಹೇಳುತ್ತಿದೆ. ಕಳೆದ ಜುಲೈ ತಿಂಗಳಿನಲ್ಲಿ ನಿವೃತ್ತಿ ಹೊಂದಿದ ಬಿಸಿಯೂಟ ನೌಕರರಿಗೆ ಇಡಿಗಂಟು ಜಾರಿ ಮಾಡಲು ನಮ್ಮ ರಾಜ್ಯ ಸರ್ಕಾರದ ಹಣಕಾಸು ಇಲಾಖೆ ಸೇವೆಯ ಆಧಾರಿತವಾಗಿ ನೀಡಲು ಶಿಫಾರಸ್ಸು ಮಾಡಿದೆ. ಆದರೆ ಇದುವರೆಗೆ ಜಾರಿ ಆಗಿರುವುದಿಲ್ಲ. ತಕ್ಷಣ ಇದನ್ನು ಜಾರಿ ಮಾಡಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಬಿಸಿಯೂಟ ಯೋಜನೆಗಳನ್ನು ಬಲಹೀನಗೊಳಿಸಲು ಇಸ್ಕಾನ ಹಾಗೂ ಧರ್ಮಾದಾರಿತ ಕೆಲ ಸಂಘ ಈ ಯೋಜನೆ ನಿಡಲು ಕೆಲ ಜಿಲ್ಲೆಗಳಲ್ಲಿ ಆಗಾಗ ಪ್ರಯತ್ನ ನಡೆಯುತ್ತಲೇ ಇರುತ್ತದೆ. ಶಾಲೆಗಳಲ್ಲಿ ಕೆಲಸ ಮಾಡುವ ಬಿಸಿಯೂಟ ನೌಕರರು ಭೀತಿಯಲ್ಲಿಯೇ ಕೆಲಸ ಮಾಡಬೇಕೆಂಬ ಪರಿಸ್ಥಿತಿ ಇದ್ದೆ ಇದೆ. ಕೇಂದ್ರ ಸರ್ಕಾರವು ಇದಕ್ಕೆ ಬೇಕಾದಂತಹ ಹಣಕಾಸು ಬಿಡುಗಡೆ ಮಾಡಲು ರಾಜ್ಯ ಸರ್ಕಾರವು ಒತ್ತಡ ಹಾಕಬೇಕಿದೆ. ಎಂಡಿಎ ಯೋಜನೆಗೆ ಪ್ರತ್ಯೇಕ ನಿರ್ದೇಶನಾಲಯ ಮಾಡಿದರೆ ಮಾತ್ರವೇ ಈ ಯೋಜನೆಯನ್ನು ಇನ್ನಷ್ಡು ಬಲಪಡಿಸಲು ಸಾಧ್ಯವಾಗುತ್ತದೆ. ಮೇಲ್ನೋಟಕ್ಕೆ ಸರ್ಕಾರದ ಸುತ್ತೋಲೆಯಲ್ಲಿ ೪ ಗಂಟೆ ಕೆಲಸವೆಂದು ನಿಗದಿಯಾಗಿದೆ. ಆದರೆ ಪ್ರತಿಶಾಲೆಯಲ್ಲಿಯೂ ದಿನಕ್ಕೆ ೬ ಗಂಟೆ ಕೆಲಸವಾಗುತ್ತದೆ. ೧೯೪೮ರ ಕನಿಷ್ಟ ವೇತನ ಕಾಯ್ದೆಯಡಿಯಲ್ಲಿ ತಿಳಿಸಿದಂತೆ ೪ ಗಂಟೆಗಿಂತ ಹೆಚ್ಚು ಕೆಲಸ ಮಾಡುವವವರಿಗೆ ಕನಿಷ್ಟ ವೇತನ ನೀಡಬೇಕು. ಆದ್ದರಿಂದ ಸುತ್ತೋಲೆಯಲ್ಲಿ ಕೆಲಸದ ಅವಧಿಯನ್ನು ಬದಲಾಯಿಸಿ ೬ ಗಂಟೆ ಕೆಲಸ ಎಂದು ನಮೂದಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಾಗ ಭರವಸೆ ನೀಡಿದಂತೆ ೬೦೦೦ ರೂ ಹೆಚ್ಚಳ ಕೂಡಲೇ ಜಾರಿ ಆಗಬೇಕು ಎಂದು ಒತ್ತಾಯಿಸಿದರು. ಜನಪರವಾಗಿ ಈ ರಾಜ್ಯದ ಅಭಿವೃದ್ದಿಗಾಗಿ ಎಲ್ಲಾ ವರ್ಗದ ಜನರಿಗೆ ನ್ಯಾಯ ನೀಡುವ ಹೊಸ ಭರವಸೆ ನೀಡಲು ಬಂದಿರುವ ಮಾನ್ಯ ಸಿದ್ದರಾಮಯ್ಯನವರ ಸರ್ಕಾರವು ರಾಜ್ಯದಲ್ಲಿ ಈ ಯೋಜನೆಯ ಅಭಿವೃದ್ಧಿಗೆ ದುಡಿಯುತ್ತಿರುವ ೧ ಲಕ್ಷದ ೧೮ ಸಾವಿರ ಬಡಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಕೂಡಲೇ ವೇತನ ಹೆಚ್ಚಳ ಮಾಡಲು ಮುಂದಾಗಬೇಕೆಂದು ಕೋರಿದರು.
ಇದೆ ವೇಳೆ ಪ್ರತಿಭಟನೆಯ ನೇತೃತ್ವವನ್ನು ಸಂಘಟನೆಯ ಅಧ್ಯಕ್ಷೆ ಎಂ.ಬಿ. ಪುಷ್ಪ, ಕಾಯಾಧ್ಯಕ್ಷೆ ಜಿ.ವಿ. ಉಷಾ, ಜಿಲ್ಲಾ ಉಪಾಧ್ಯಕ್ಷರಾದ ಯಶೋಧ, ಮೀನಾಕ್ಷಿ , ಕಾರ್ಯದರ್ಶಿ ಗಳಾದ ಚನ್ನಮ್ಮ, ಸೌಮ್ಯ ಜಿಲ್ಲಾ ಮುಖಂಡರಾದ ಕಸ್ತೂರಿ, ಲೋಲಾಕ್ಷಿ, ಉಷಾ ,ಮಂಜುಳಾ , ಸಾವಿತ್ರಿ , ಸುಮಿತ್ರಾ, ಕಮಲ, ಜಿಕೆ. ಶೋಬಾ, ನಾಸೀರಾಬಾನು, ಜ್ಯೋತಿ, ಯಶೋಧ, ಸುಮಾಬಾಯಿ, ಹೇಮಾವತಿ ಇನ್ನಿತರರು ಭಾಗವಹಿಸಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page