Home ರಾಜ್ಯ ಹಾಸನ ಹಾಸನ ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ಕೈಬಿಡಲು ಆಗ್ರಹಿಸಿ ಉಪನ್ಯಾಸಕರು, ವಿದ್ಯಾರ್ಥಿಗಳ ಪ್ರತಿಭಟನೆ

ಹಾಸನ ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ಕೈಬಿಡಲು ಆಗ್ರಹಿಸಿ ಉಪನ್ಯಾಸಕರು, ವಿದ್ಯಾರ್ಥಿಗಳ ಪ್ರತಿಭಟನೆ

0

ಹಾಸನ: ವಿಶ್ವವಿದ್ಯಾಲಯ ಬಂದ್ ಮಾಡುವ ಸರ್ಕಾರದ ನಿರ್ಧಾರವಾನ್ನು ವಾಪಸ್ ಪಡೆದು ಇಲ್ಲೆ ಉಳಿಸುವ ಮೂಲಕ ಬಡ ವಿದ್ಯಾರ್ಥಿಗಳಿಗೆ ನೆರವಾಗುವಂತೆ ಆಗ್ರಹಿಸಿ ವಿಶ ವಿದ್ಯಾಲಯದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸೇರಿ ಸೋಮವಾರ ಕಾಲೇಜು ಮುಂದೆ ಪ್ರತಿಭಟನೆ ನಡೆಸಿದರುನಗರದ ಬೆಂಗಲೂರು ರಸ್ತೆ ಹೊರವಲಯದಲ್ಲಿರುವ ಹಾಸನ ವಿಶ್ವವಿದ್ಯಾಲಯದ ಎದುರು ಧರಣಿ ಕುಣಿತ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆಯಲಿ ಭಾಗವಹಿಸಿದರು. ಈ ವೇಳೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಹಾಸನ ವಿಶ್ವವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಆಗ್ರಹಿಸಿದರು.















ಹಾಸನ ವಿಶ್ವವಿದ್ಯಾಲಯವನ್ನು ಬಂದ್ ಮಾಡಿದರೆ ಜಿಲ್ಲೆಯ ಸಾವಿರಾರು ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ವಿಶ್ವವಿದ್ಯಾಲಯ ಹಾಸನ ಕೇಂದ್ರದಲ್ಲಿಯೇ ಇರುವುದರಿಂದ ಹೆಚ್ಚಿನ ಪ್ರಮಾಣದಲಿ. ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಸಹಕಾರಿಯಾಗಿದೆ. ಇದೀಗ ಸರ್ಕಾರದ ನಿರ್ಧಾರ ದಿಂದ ಸಾವಿರಾರು ವಿದ್ಯಾರ್ಥಿಗಳು ಪಕ್ಕದ ಜಿಲ್ಲೆ ಅಥವಾ ರಾಜಧಾನಿಗೆ ಪದವಿ, ಸ್ನಾತಕೋತ ರ ಪದವಿ ಶಿಕ್ಷಣ
























ಪಡೆಯಲು ಹೋಗಬೇಕಾಗುತ್ತದೆ. ಆದ್ದರಿಂದ ಸರ್ಕಾರ ತನ್ನ ನಿರ್ಧಾರವನ್ನು ಬದಲಿಸಿ, ಹಾಸನ ವಿಶ್ವವಿದ್ಯಾಲಯವನ್ನು ಇಲೆ ಉಳಿಸಬೇಕು ಎಂದು ಆಗ್ರಹಿಸಿದರು. ವಿಶ್ವವಿದ್ಯಾಲಯವನ್ನು ಬಂದ್ ಮಾಡಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಇನು ಸರಕಾರದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಸಿ ಪ್ರಾರಂಭಗೊಂಡಿದ್ದ ೯ ವಿಶ್ವವಿದ್ಯಾಲಯಗಳನ್ನು ಮುಚ್ಚುವ ತೀರ್ಮಾನ ಕೈಗೊಂಡಿರುವುದು ಸಮಂಜಸವಲ್ಲ. ಸಂವಿಧಾನದ ಮೂಲಭೂತ ಹಕ್ಕುಗಳು ಪ್ರತಿಯೊಬ್ಬರಿಗೂ ಶಿಕ್ಷಣ ನೀಡುವುದು. ವಿವಿಗಳನ್ನು ಈರೀತಿ ಮುಚ್ಚಿದರೇ ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಾರೆ ಎಂದ ಅವರು, ದಯಮಾಡಿ ಈ ತಮ್ಮ ಸಮಿತಿಯ ತೀರ್ಮಾನವನ್ನು ಕೈಬಿಡುವಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ಪುಷ್ಪಾವತಿ, ಉಪಸ್ಥಿತರಿದ್ದರು.

 

You cannot copy content of this page

Exit mobile version