Home ಬೆಂಗಳೂರು ಡೆಂಗ್ಯೂ ಪರೀಕ್ಷೆ | ನಿಗದಿತ ಮೊತ್ತಕ್ಕಿಂತ ಹೆಚ್ಚಿನ ಶುಲ್ಕವಸೂಲಿ: ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ದಾಳಿ

ಡೆಂಗ್ಯೂ ಪರೀಕ್ಷೆ | ನಿಗದಿತ ಮೊತ್ತಕ್ಕಿಂತ ಹೆಚ್ಚಿನ ಶುಲ್ಕವಸೂಲಿ: ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ದಾಳಿ

0

ಡೆಂಗ್ಯೂ ಪರೀಕ್ಷೆಗಾಗಿ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚುವರಿ ದರವನ್ನು ಖಾಸಗಿ ಲ್ಯಾಬ್’ಗಳು ಪಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಆರೋಗ್ಯ ಇಲಾಖೆ ದಾಳಿಗಳನ್ನು ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿದೆ.

ಬೆಂಗಳೂರಿನ ವಿವಿಧ ಭಾಗದಲ್ಲಿರುವ ಖಾಸಗಿ ಸಂಸ್ಥೆ, ಆಸ್ಪತ್ರೆ ಹಾಗೂ ಪರೀಕ್ಷೆ ಕೇಂದ್ರಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚುವರಿಯಾಗಿ ದರ ಪಡೆಯುತ್ತಿದ್ದ 22 ಲ್ಯಾಬ್’ಗಳಿಗೆ ನೋಟಿಸ್ ನೀಡಲಾಗಿದೆ. ಸರ್ಕಾರದ ದರ ನಿಗದಿ ಆದೇಶವನ್ನು ಎಲ್ಲಾ ಖಾಸಗಿ ಲ್ಯಾಬ್, ಆಸ್ಪತ್ರೆಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಡೆಂಗಿ ಪರೀಕ್ಷೆಗೆ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ವಸೂಲಿ ಮಾಡುವುದು ಕಂಡುಬಂದಲ್ಲಿ ಅಂತಹ ಖಾಸಗಿ ಲ್ಯಾಬ್, ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

You cannot copy content of this page

Exit mobile version