ನವದೆಹಲಿ: ದೆಹಲಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ 129 ಸೋಂಕುಗಳು ವರದಿಯಾಗಿವೆ. ಈ ಹಿನ್ನಲೆ ಹೊಸ ಪ್ರಕರಣಗಳೊಂದಿಗೆ ರಾಷ್ಟ್ರ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು 500 ರ ಗಡಿ ದಾಟಿದೆ.
ನಗರದಲ್ಲಿ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ಇದು ಕೂಡ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿರಬಹುದು ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (MCD) ನಗರವನ್ನು 12 ವಲಯಗಳಾಗಿ ವಿಂಗಡಿಸಿದೆ. ಅದರಲ್ಲಿ ಕೇಂದ್ರ ವಲಯದಿಂದ ಗರಿಷ್ಠ ಸಂಖ್ಯೆಯ ಪ್ರಕರಣಗಳು ವರದಿಯಾಗಿವೆ ಎಂದು ತಿಳಿದು ಬಂದಿದೆ.