Friday, June 14, 2024

ಸತ್ಯ | ನ್ಯಾಯ |ಧರ್ಮ

ಡಿನೋಟಿಫಿಕೇಷನ್‌ ಆರೋಪ: ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ಬೆಂಗಳೂರಿನಲ್ಲಿರುವ ಸರ್ಕಾರಿ ಸ್ವತ್ತನ್ನು ಡಿನೋಟಿಫಿಕೇಷನ್‌ ಮಾಡಿದ ಆರೋಪದಡಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಬಿ.ಜೆ.ಪಿ ಮುಖಂಡ ಎನ್‌.ಆರ್‌. ರಮೇಶ್‌ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಆವಧಿಯಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು, ಕಸಬಾ ಹೋಬಳಿಯ ಸಿದ್ದಾಪುರ ಗ್ರಾಮದಲ್ಲಿ 200 ಕೋಟಿ ಮತ್ತು ಭೂಪಸಂದ್ರದಲ್ಲಿ 350 ಕೋಟಿ ಅಕ್ರಮ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಡಿನೋಟಿಫಿಕೇಶನ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆಗಳ ಸಮೇತ ಬಿಜೆಪಿ ನಾಯಕ ಎನ್‌.ಆರ್‌ ರಮೇಶ್‌ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ದೂರಿನಲ್ಲಿರುವ ಮಾಹಿತಿ ಪ್ರಾಕರ, ಡಿನೋಟಿಫಿಕೇಷನ್‌ ಮಾಡಿರುವ ಸರ್ಕಾರಿ ಸ್ವತ್ತು ಬೆಂಗಳೂರು ದಕ್ಷಿಣ ತಾಲ್ಲೂಕು, ಕಸಬಾ ಹೋಬಳಿಯ ಸಿದ್ದಾಪುರ ಗ್ರಾಮದ ಸರ್ವೆ ನಂಬರ್‌ 27/1,28/4,28/5 ಮತ್ತು 28/6 ರ 02 ಎಕೆರೆ 39.5 ಗುಂಟೆಯಷ್ಟು ಸರ್ಕಾರಿ ಸ್ವತ್ತನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾಸ್ಟರ್‌ ಪ್ಲಾನ್‌ನಂತೆ ಉದ್ಯಾನವನ ಮತ್ತು ಸಾರ್ವಜನಿಕ ಬಳಕೆಗೆ ಮೀಸಲಿಟ್ಟಿದ್ದ ಜಾಗ ಎಂದು ತಿಳಿದುಬಂದಿದೆ.

Related Articles

ಇತ್ತೀಚಿನ ಸುದ್ದಿಗಳು