Sunday, June 16, 2024

ಸತ್ಯ | ನ್ಯಾಯ |ಧರ್ಮ

ಪೀಪಲ್ ಮೀಡಿಯಾ ವರದಿ ಆಧರಿಸಿ ಸ್ಪಷ್ಟೀಕರಣ ನೀಡಿದ ಸಾರ್ವಜನಿಕ ಶಿಕ್ಷಣ ಇಲಾಖೆ

ನವೆಂಬರ್ 6 ರಂದು ಕರ್ನಾಟಕ ಸರ್ಕಾರ ಶಿಕ್ಷಣ ಇಲಾಖೆ ಅಡಿಯಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ TET ಪ್ರವೇಶ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ ಮಹಿಳಾ ಅಭ್ಯರ್ಥಿಯೊಬ್ಬರ ಪರೀಕ್ಷೆ ಪ್ರವೇಶ ಪತ್ರದಲ್ಲಿ ಅಶ್ಲೀಲ ಫೋಟೋ ಪ್ರಕಟವಾಗಿತ್ತು. ಇದರ ಅಡಿಯಲ್ಲಿ ನವೆಂಬರ್ 8 ರ ಮಂಗಳವಾರ ಪೀಪಲ್ ಮೀಡಿಯಾ ಒಂದು Exclusive ವರದಿ ಸಿದ್ದಪಡಿಸಿತ್ತು.

ನಂತರ ಇದು ರಾಜ್ಯಾದ್ಯಂತ ವ್ಯಾಪಕವಾಗಿ ಸುದ್ದಿ ಹರಡಿದ ಬೆನ್ನಲ್ಲೇ ಶಿಕ್ಷಣ ಇಲಾಖೆ ಸಾರ್ವಜನಿಕ ಸ್ಪಷ್ಟೀಕರಣ ನೀಡಿದೆ. ಅದರಂತೆ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಯ ನಂತರ ತಮ್ಮ ಇಲಾಖೆಯ ಎಲ್ಲಾ ಸರ್ವರ್ ಮತ್ತು ತಾಂತ್ರಿಕ ಸಮಸ್ಯೆಗಳನ್ನು ಪರಿಶೀಲಿಸಲಾಗಿದೆ. ಅಂತಹ ಯಾವ ಸಮಸ್ಯೆ ಕೂಡಾ ಇಲಾಖೆಯ ವೆಬ್ಸೈಟ್ ನಲ್ಲಿ ಕಂಡುಬಂದಿಲ್ಲ. ಅಭ್ಯರ್ಥಿಯು TET ಪ್ರವೇಶ ಬಯಸಿ ಸಲ್ಲಿಸುವ ಅರ್ಜಿಯ ಐಡಿ ಮತ್ತು ಪಾಸ್ವರ್ಡನ್ನು ಅವರೇ ಗೌಪ್ಯತೆ ಕಾಪಾಡಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಜೊತೆಗೆ ಅಭ್ಯರ್ಥಿಯು ತಾನು ನೀಡಿರುವ ಮಾಹಿತಿಯು ಸರಿಯಾಗಿದೆ ಎಂದು ಖಚಿತಪಡಿಸಿಕೊಂಡು ಅರ್ಜಿ Submit ಮಾಡಿದ ನಂತರವೇ ನಿಗದಿತ ಅರ್ಜಿ ಶುಲ್ಕ ಪಾವತಿಸಿ, ಅಭ್ಯರ್ಥಿಯು ತನ್ನ ಅನ್‌ಲೈನ್ ಅರ್ಜಿಯ ಪ್ರಿಂಟ್ ಅನ್ನು ಪಡೆಯುತ್ತಾರೆ. ಅಭ್ಯರ್ಥಿಯು ತನ್ನ ಅರ್ಜಿಸಂಖ್ಯೆ ಮತ್ತು ಜನ್ಮದಿನಾಂಕವನ್ನು ನಮೂದಿಸಿ ತನ್ನ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳುತ್ತಾರೆ. ಈ ತಂತ್ರಾಂಶವು KSWAN ಅಂತರ್ಜಾಲ ಸೌಲಭ್ಯವನ್ನು ಹೊಂದಿದ್ದು, ಸಂಪೂರ್ಣ ಕರ್ನಾಟಕ ಸರ್ಕಾರದ ಇ-ಆಡಳಿತ ಇಲಾಖೆಯ State Data Center (SDC) ನಿಯಂತ್ರಣದ ಸರ್ವ‌್ರನಲ್ಲಿ ಅಳವಡಿಸಲಾಗಿರುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟೀಕರಣ ಕೊಟ್ಟಿದೆ.

ಆದಾಗ್ಯೂ ಇಲ್ಲಿ ಆದ ಲೋಪದ ಬಗ್ಗೆ ದೂರು ದಾಖಲಿಸಿ ತನಿಖೆ ನಡೆಸಲಾಗುತ್ತದೆ. ಆ ಮೂಲಕ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಪ್ರಕಟಣಾ ಪತ್ರದಲ್ಲಿ ತಿಳಿಸಿದ್ದಾರೆ. ಪೀಪಲ್ ಮೀಡಿಯಾ ಮಾಡಿದ ವರದಿ ಅಡಿಯಲ್ಲಿ ಈಗಾಗಲೇ ವಿಚಾರಣೆ ನಡೆದಿದೆ. ಸಂತ್ರಸ್ತ ಅಭ್ಯರ್ಥಿ ಕಡೆಯಿಂದಲೂ ಬುಧವಾರ ಬೆಳಿಗ್ಗೆ ದೂರು ದಾಖಲಾಗುವ ಸಾಧ್ಯತೆ ಇದೆ.

Related Articles

ಇತ್ತೀಚಿನ ಸುದ್ದಿಗಳು