Friday, May 16, 2025

ಸತ್ಯ | ನ್ಯಾಯ |ಧರ್ಮ

ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿ ಕರ್ತವ್ಯ ನಿರ್ವಹಿಸಿ – ಉಪ ಲೋಕಾಯುಕ್ತರಾದ ಎನ್. ಫಣೀಂದ್ರ ಸೂಚನೆ

ಹಾಸನ : ಸಾರ್ವಜನಿಕರು ಕಚೇರಿಗೆ ಬಂದ ಸಂದರ್ಭದಲ್ಲಿ ಅಧಿಕಾರಿಗಳು ಸ್ಪಂದಿಸಿ ಸಮಾಧಾನದಿಂದ ಆಲಿಸಿ ಅವರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿ ಎಂದು ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆದ ಸಾರ್ವಜನಿಕರ ಕುಂದುಕೊರತೆ ದೂರುಗಳ ಸ್ವೀಕಾರ, ವಿಚಾರಣೆ ಹಾಗೂ ವಿಲೇವಾರಿ ಕಾರ್ಯಕ್ರಮದಲ್ಲಿ ಸಮಾಧಾನ ಚಿತ್ತದಿಂದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಿದ ಅವರು ಇಂದು 240 ಜನರಿಗೆ ಟೋಕನ್ ನೀಡಲಾಗಿದೆ ಅದರಲ್ಲಿ ಇಂದು 180 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಉಳಿದ ಅರ್ಜಿಗಳನ್ನು ನಾಳೆ ಬೆಳಗ್ಗೆ 10 ಗಂಟೆಯಿಂದ ಇದೆ ಸ್ಥಳದಲ್ಲಿ ಲೋಕಾಯುಕ್ತದ ಇತರೆ ನ್ಯಾಯಾಧೀಶರುಗಳು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಬಂದು ತಮ್ಮ ಅಹವಾಲುಗಳನ್ನು ಸಲ್ಲಿಸುವಂತೆ ಸೂಚಿಸಿದರು. ಈಗಾಗಲೇ ಲೋಕಾಯುಕ್ತದಲ್ಲಿರುವ ಪ್ರಕರಣಗಳಲ್ಲಿ ಆಯ್ದ ಪ್ರಕರಣಗಳನ್ನು ನಾಳೆ ಬೆಳಗ್ಗೆ 10 ಗಂಟೆಯಿಂದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅರ್ಜಿಗಳ ವಿಚಾರಣೆ ನಡೆಸಿ ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಕರ್ನಾಟಕ ಲೋಕಾಯುಕ್ತದ ವಿಚಾರಣೆಗಳು 07 ಅಪರ ನಿಬಂಧಕರಾದ ಪೃಥ್ವಿರಾಜ್ ವರ್ಣೇಕರ್, ಕರ್ನಾಟಕ ಲೋಕಾಯುಕ್ತದ ಕಾನೂನು ಅಭಿಪ್ರಾಯ 02 ಸಹಾಯಕ ನಿಬಂಧಕರು ಹಾಗೂ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಶುಭವೀರ ಬಿ, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದಾಕ್ಷಾಯಿಣಿ ಬಿ.ಕೆ. ಸಿವಿಲ್ ನ್ಯಾಯಾಧೀಶರು ಹಾಗೂ ಉಪಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ್ ಪಿ.ಎಂ ಪಾಟೀಲ್, ಲೋಕಾಯುಕ್ತ ಪೊಲೀಸ್ ಅಧಿಕ್ಷಕರಾದ ಸ್ನೇಹ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ, ಎಸ್.ಪಿ ಮಹಮ್ಮದ್ ಸುಜೀತ, ಹೆಚ್ಚುವರಿ ಪೊಲೀಸ್ ಅಧಿಕಾರಿ ತಮ್ಮಯ್ಯ, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲ ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page