ವಾಲ್ಮೀಕಿ ಸಮುದಾಯದ ಬಗ್ಗೆ ರಮೇಶ್ ಕತ್ತಿ ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನೆಲೆ, ಬೆಳಗಾವಿ ಜಿಲ್ಲೆ ಗೋಕಾಕ್ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆದಿದೆ.
ವಾಲ್ಮೀಕಿ ಸಮಾಜದ ಮುಖಂಡರ ನೇತೃತ್ವದಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಘೋಷಣೆ ಕೂಗಿ ಬೃಹತ್ ಪ್ರತಿಭಟನೆ ನಡೆದಿದ್ದು, ಮಾನವ ಸರಪಳಿ ಮಾಡಿ ಟೈಯರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಹುಕ್ಕೇರಿ ಸಹಕಾರಿ ಚುನಾವಣೆಯಲ್ಲಿ ಗೆದ್ದು ಜಾರಕಿಹೊಳಿ ಬ್ರದರ್ಸ್ ಗೆ ಮೀಸೆ ತಿರಿವಿದ್ದ ರಮೇಶ್ ಕತ್ತಿ, ಇದೀಗ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ತೊಡೆತಟ್ಟಿದ್ದರು. ಈ ನಡುವೆ ರಾಜಕೀಯ ಆರೋಪ ಪ್ರತ್ಯಾರೋಪದ ತಾರಕಕ್ಕೇರಿ, ರಮೇಶ್ ಕತ್ತಿ ಅವರು ನಾಯಕ ಸಮಾಜದ (ವಾಲ್ಮೀಕಿ ಸಮಾಜ) ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ್ದರು. ಇದೀಗ ಈ ಬೆಳವಣಿಗೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ರಮೇಶ್ ಕತ್ತಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ತಕ್ಷಣವೇ ಅವರ ಬಂಧನ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಕೇವಲ ಬೆಳಗಾವಿ ಮಾತ್ರವಲ್ಲದೇ ಕೊಪ್ಪಳ, ರಾಯಚೂರಿನಲ್ಲೂ ಇದೇ ರೀತಿಯ ಹೋರಾಟ ನಡೆದಿದೆ.