ವಾಲ್ಮಿಕಿ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ; ರಮೇಶ್ ಕತ್ತಿ ವಿರುದ್ಧ ವ್ಯಾಪಕ ಆಕ್ರೋಶ

ವಾಲ್ಮೀಕಿ ಸಮುದಾಯದ ಬಗ್ಗೆ ರಮೇಶ್ ಕತ್ತಿ ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನೆಲೆ, ಬೆಳಗಾವಿ ಜಿಲ್ಲೆ ಗೋಕಾಕ್​ ಪಟ್ಟಣದ​ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆದಿದೆ.

ವಾಲ್ಮೀಕಿ ಸಮಾಜದ ಮುಖಂಡರ ನೇತೃತ್ವದಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಘೋಷಣೆ ಕೂಗಿ ಬೃಹತ್ ಪ್ರತಿಭಟನೆ ನಡೆದಿದ್ದು, ಮಾನವ ಸರಪಳಿ ಮಾಡಿ ಟೈಯರ್​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಹುಕ್ಕೇರಿ ಸಹಕಾರಿ ಚುನಾವಣೆಯಲ್ಲಿ ಗೆದ್ದು ಜಾರಕಿಹೊಳಿ ಬ್ರದರ್ಸ್​​ ಗೆ ಮೀಸೆ ತಿರಿವಿದ್ದ ರಮೇಶ್ ಕತ್ತಿ, ಇದೀಗ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ತೊಡೆತಟ್ಟಿದ್ದರು. ಈ ನಡುವೆ ರಾಜಕೀಯ ಆರೋಪ ಪ್ರತ್ಯಾರೋಪದ ತಾರಕಕ್ಕೇರಿ, ರಮೇಶ್ ಕತ್ತಿ ಅವರು ನಾಯಕ ಸಮಾಜದ (ವಾಲ್ಮೀಕಿ ಸಮಾಜ) ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ್ದರು. ಇದೀಗ ಈ ಬೆಳವಣಿಗೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ರಮೇಶ್ ಕತ್ತಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ತಕ್ಷಣವೇ ಅವರ ಬಂಧನ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಕೇವಲ ಬೆಳಗಾವಿ ಮಾತ್ರವಲ್ಲದೇ ಕೊಪ್ಪಳ, ರಾಯಚೂರಿನಲ್ಲೂ ಇದೇ ರೀತಿಯ ಹೋರಾಟ ನಡೆದಿದೆ.

Related Articles

ಇತ್ತೀಚಿನ ಸುದ್ದಿಗಳು