Friday, June 14, 2024

ಸತ್ಯ | ನ್ಯಾಯ |ಧರ್ಮ

ದೇಶದಲ್ಲಿ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಶೇ 41ರಷ್ಟು ಏರಿಕೆ: ಎನ್‌ಸಿಆರ್‌ಬಿ ವರದಿ

ನವದೆಹಲಿ: ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದ್ದು, ಆರ್ಥಿಕ ಸಮಸ್ಯೆ ಮತ್ತು ಉದ್ಯೋಗದ ಸಮಸ್ಯೆಯಿಂದಾಗಿ ದೇಶದಲ್ಲಿ ವಾರಕ್ಕೆ ಸುಮಾರು 50 ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಸಂಸ್ಥೆ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿದ ವರದಿಯಲ್ಲಿ ಕಂಡುಬಂದಿದೆ. 

ವರದಿಯ ಅಂಕಿ-ಅಂಶಗಳ ಪ್ರಕಾರ 2021 ಕ್ಕಿಂತ 2022 ರಲ್ಲಿ ಆತ್ಮಹತ್ಯೆ ಮಾಡಿಕೊಂಡು ಸತ್ತವರ ಸಂಖ್ಯೆ ಶೇ 41% ಹೇಚ್ಚಾಗಿದೆ.ಈ ಕಾರಣ 2021 ರಲ್ಲಿದ್ದ 1,837 ಆತ್ಮಹತ್ಯೆಗಳ ಪ್ರಮಾಣ, 2021ರಲ್ಲಿ  2,593ಕ್ಕೆ ಏರಿಕೆಯಾಗಿದೆ.

ವೈದ್ಯರು ನೀಡಿರುವ ಮಾಹಿತಿ ಪ್ರಕಾರ ಆತಂಕ, ಖಿನ್ನತೆ, ಸಾವಿನ ಬೆದರಿಕೆ, ಉದ್ಯೋಗದಲ್ಲಿ ಸರಿಯಾಗಿ ಸಂಬಳ ಸಿಗದಿರುವುದು, ವೃತ್ತಿ ಸಮಸ್ಯೆ, ಉದ್ಯೋಗದ ಸಮಸ್ಯೆ, ಕಿರುಕುಳ, ಮನೆ ಸಮಸ್ಯೆ, ಮಕ್ಕಳ ಶಿಕ್ಷಣ, ಸಾಲ, ಮುಂತಾದ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಎನ್‌ಸಿಆರ್‌ಬಿ ತಿಳಿಸಿದೆ. 

2022ರ ರಾಷ್ಟ್ರೀಯ ಅಪರಾಧ ದಾಖಲೆಗಳ ಸಂಸ್ಥೆ ಬಿಡುಗಡೆ ಮಾಡಿರುವ ವರದಿಯ ಪ್ರಕಾರ, ಕರ್ನಾಟಕದಲ್ಲಿ 480 ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. 

Related Articles

ಇತ್ತೀಚಿನ ಸುದ್ದಿಗಳು