ಬೆಂಗಳೂರು: ಜುಲೈ 2025ರಿಂದ ಜೂನ್ ತನಕ 4 ವರ್ಷಗಳಲ್ಲಿ ರೂ.2500.0 ಕೋಟಿಗಳ (ರೂ.1750 ಕೋಟಿ ವಿಶ್ವ ಬ್ಯಾಂಕ್‍ನಿಂದ ಮತ್ತು ರೂ.750.0 ಕೋಟಿ ರಾಜ್ಯ ಸರ್ಕಾರದಿಂದ) ಬಾಹ್ಯ ನಿಧಿ ಸಹಯೋಗದೊಂದಿಗೆ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಹಾಗೂ ಬಾಹ್ಯ ನಿಧಿಯ ಅನುಮೋದನೆಗಾಗಿ ಭಾರತ ಸರ್ಕಾರದ ಆರ್ಥಿಕ ವ್ಯವಹಾರಗಳ ಇಲಾಖೆಯ ಮೂಲಕ ಪ್ರಾಥಮಿಕ ಯೋಜನೆಯ ವರದಿಯನ್ನು ವಿಶ್ವಬ್ಯಾಂಕ್‍ಗೆ ಸಲ್ಲಿಸಲು ಸಚಿವ ಸಂಪುಟ ನಿರ್ಣಯಿಸಿದೆ.
ಗುಣಮಟ್ಟದ ಶಿಕ್ಷಣ ನೀಡುವುದು ಇಲಾಖೆಯ ಪ್ರಾಥಮಿಕ ಗುರಿಯಾಗಿದ್ದು, ಉನ್ನತ ಶಿಕ್ಷಣದ ಮಟ್ಟವನ್ನು ಸುಧಾರಿಸಲು ರಾಜ್ಯದಲ್ಲಿ ಖಾಸಗಿ ಸಂಸ್ಥೆಗಳು ಒದಗಿಸುವ ಸಂಪನ್ಮೂಲಗಳನ್ನು ಒದಗಿಸುವುದು ಗುರಿಯಾಗಿದೆ.
ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಕಡ್ಡಾಯ ಪ್ರವೇಶಕ್ಕೆ ರಿಯಾಯಿತಿ:
ಕರ್ನಾಟಕ ಶಿಕ್ಷಣ ಸಂಸ್ಥೆಗಳು (ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯ ನೀಡಲು ನಿಬಂಧನೆ ಮತ್ತು ಷರತ್ತುಗಳು) (ಕಾಲೇಜು ಶಿಕ್ಷಣ) (1ನೇ ತಿದ್ದುಪಡಿ) ನಿಯಮಗಳು 2024 (ಅನುಬಂಧ-3) ಕರಡನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿ ಅದರಿಂದ ಬಾಧಿತರಾಗುವವರಿಂದ ಆಕ್ಷೇಪಣೆ/ಸಲಹೆಗಳನ್ನು ಆಹ್ವಾನಿಸಲು ಮತ್ತು ಕರಡನ್ನು ನಿಯಮಗಳಿಗೆ ಯಾವುದೇ ಆಕ್ಷೇಪಣೆ/ಸಲಹೆಗಳು ಸ್ವೀಕೃತವಾಗದಿದ್ದಲ್ಲಿ ಅಥವಾ ಸ್ವೀಕೃತವಾದ ಆಕ್ಷೇಪಣೆ / ಸಲಹೆಗಳನ್ನು ಪರಿಗಣಿಸಿ ಕರಡು ನಿಯಮಗಳಲ್ಲಿ ಯಾವುದೇ ಪ್ರಮುಖ ತಿದ್ದುಪಡಿಗಳನ್ನು ಮಾಡದಿದ್ದಲ್ಲಿ, ಸದರಿ ಕರಡು ನಿಯಮಗಳನ್ನು ಪುನ: ಸಚಿವ ಸಂಪುಟದ ಮುಂದೆ ಮಂಡಿಸದೇ ಅಂತಿಮಗೊಳಿಸಲು ಸಚಿವ ಸಂಪುಟ ನಿರ್ಣಯಿಸಿದೆ.
ರಾಜ್ಯದಲ್ಲಿನ ಒಟ್ಟು ಅಲ್ಪಸಂಖ್ಯಾತರ ಜನಸಂಖ್ಯೆಯಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ದ ಮತ್ತು ಪಾರ್ಸಿ ಸಮುದಾಯಗಳ ಜನಸಂಖ್ಯೆ ಪ್ರಮಾಣವು ತುಂಬಾ ಕಡಿಮೆಯಿರುವುದರಿಂದ ಅಲ್ಪಸಂಖ್ಯಾತರ ಸಮುದಾಯದವರು ನಡೆಸುವ ಶೈಕ್ಷಣಿಕ ಸಂಸ್ಥೆಗಳನ್ನು ಅಲ್ಪಸಂಖ್ಯಾತರ ಶೈಕ್ಷಣಿಕ ಸಂಸ್ಥೆಗಳೆಂದು ಘೋಷಿಸಲು ಹಾಲಿ ಜಾರಿಯಲ್ಲಿರುವ ನಿಯಮ ಮತ್ತು ಆದೇಶಗಳಲ್ಲಿ ನಿಗಧಿಪಡಿಸಿರುವ ಶೇಕಡಾವಾರು ವಿದ್ಯಾರ್ಥಿಗಳು ಲಭ್ಯವಾಗುವುದು ಕಷ್ಟಕರವಾಗಿರುವುದರಿಂದ ಈ ನಿಯಮಗಳಿಗೆ ತಿದ್ದುಪಡಿ ತರಲು ಪ್ರಸ್ತಾಪಿಸಲಾಗಿತ್ತು.
ಎಸ್.ಸಿ / ಎಸ್.ಟಿ ಹಾಸ್ಟೆಲ್‍ಗಳಿಗೆ ಮಂಚ-ಹಾಸಿಗೆ ಪೂರೈಕೆಗೆ ಒಪ್ಪಿಗೆ.
ಕಲ್ಯಾಣ ಕರ್ನಾಟಕ ಹಿಂದುಳಿದ ಪ್ರದೇಶ ಅಭಿವೃದ್ಧಿಪಡಿಸುವ ಸಲುವಾಗಿ ಕಲ್ಯಾಣ ಕರ್ನಾಟಕದ ಎಸ್.ಸಿ/ ಎಸ್.ಟಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಸರ್ಕಾರಿ ವಸತಿ ಶಾಲೆಗಳು ಮತ್ತು ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಟೂ ಟಯರ್ ಕಾಟ್, ಕಾಯರ್ ಮ್ಯಾಟ್ರಸ್ ಹಾಗೂ ಎಲೆಕ್ಟ್ರೀಕ್ ಹಿಟ್ ಪಂಪ್‍ಗಳನ್ನು ಪೂರೈಸಲು ಪ್ರಸ್ತಾಪಿಸಿದೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ 2022-23ನೇ ಸಾಲಿನಲ್ಲಿ ಒದಗಿಸಿದ್ದ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿ ಲಭ್ಯವಿರುವ ರೂ. 4266.38 ಲಕ್ಷಗಳ ಅನುದಾನದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ವಸತಿ ಶಾಲೆಗಳು ಹಾಗೂ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಟೂ ಟಯರ್ ಕಾಟ್, ಕಾಯರ್ ಮ್ಯಾಟ್ರಸ್ ಹಾಗೂ ಎಲೆಕ್ಟ್ರೀಕ್ ಹಿಟ್ ಪಂಪ್‍ಗಳನ್ನು ಪೂರೈಸುವುದಕ್ಕಾಗಿ ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಣಯಿಸಿದೆ.[7:20 pm, 6/12/2024] +91 94481 42741: ರಸ್ತೆ ಸುಧಾರಣಾ ಕಾಮಗಾರಿಗೆ ರೂ.25.00 ಕೋಟಿ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ 2024-25ನೇ ಸಾಲಿನ ಅಧ್ಯಕ್ಷರ ವಿವೇಚನಾ ನಿಧಿಯಡಿ ಕೈಗೊಳ್ಳಲಾಗುತ್ತಿರುವ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಇಜೇರಿ ದಿಂದ ಯಡ್ರಾಮಿ ವರೆಗೆ 53.42 ಕಿ.ಮೀ ರಿಂದ 63.42 ಕಿ.ಮೀ ವರೆಗೆ ರಸ್ತೆ ಸುಧಾರಣೆ ಕಾಮಗಾರಿಯ ರೂ.25.00 ಕೋಟಿಗಳ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಣಯಿಸಿದೆ.
ಜನನ ಮತ್ತು ಮರಣ ಪ್ರಮಾಣಪತ್ರಗಳಿಗೆ ಏಕರೂಪತೆ ತರಲು ನಿಯಮ ತಿದ್ದುಪಡಿ
ಕರ್ನಾಟಕ ಸರ್ಕಾರದ (ವ್ಯವಹಾರ ನಿರ್ವಹಣೆ) ನಿಯಮಗಳು, 1977ರ ಭಾಗ 2ರ ನಿಯಮ 20(3) ರನ್ವಯ ಅನುಬಂಧ 2ರಲ್ಲಿರುವ “ಕರ್ನಾಟಕ ಜನನ ಮರಣಗಳ ನೋಂದಣಿ (ತಿದ್ದುಪಡಿ) ನಿಯಮಗಳು 2024” ಕ್ಕೆ ಸಚಿವ ಸಂಪುಟದಿಂದ ಅನುಮೋದನೆ ನೀಡಿದೆ.
ಮರಣದ ಪ್ರಮಾಣ ಪತ್ರದಲ್ಲಿ ಕಾಯಿಲೆಯ ಅಥವಾ ಅಸ್ವಸ್ಥತೆಯ ಇತಿಹಾಸ ಒಂದುವೇಳೆ ಲಭ್ಯವಿದ್ದರೇ ದಾಖಲಿಸಲು ವಿದ್ಯುನ್ಮಾನ ಮಾಧ್ಯಮದ ಮೂಲಕ ಜನನ ಮತ್ತು ಮರಣ ಪತ್ರ ವಿತರಿಸುವುದು.
ಹೊಸಕೋಟೆ ತಾಲ್ಲೂಕಿನ ರಸ್ತೆ ಅಭಿವೃದ್ಧಿಗೆ ರೂ.97.27 ಕೋಟಿ.
ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿಗಳ ಮಂತ್ರಾಲಯದಿಂದ ಅನುಮೋದಿತ Construction of two lane ROB and its approaches in lieu of existing level crossing no.130 (at km 48.300) from Km 47.900 to Km 49.280 on NH 2027 Koraluru village in State of Karnataka (Job No. NH-207 (7)-2016-17-010-S&R (B) ಕಾಮಗಾರಿಯ ವಿನ್ಯಾಸ ಬದಲಾವಣೆಯಿಂದಾಗಿ ಉಂಟಾಗುವ ಪರಿಷ್ಕøತ ಮೊತ್ತ ರೂ.97.27 ಕೋಟಿಗಳ ಪೈಕಿ ರಾಜ್ಯ ಸರ್ಕಾರದ ವತಿಯಿಂದ ಭರಿಸಬೇಕಿರುವ ಹೆಚ್ಚುವರಿ ಮೊತ್ತ ರೂ.54.25 ಕೋಟಿಗಳ (ಸಣ್ಣ ನೀರಾವರಿ ಇಲಾಖೆಯಿಂದ ನೀಡಲಾಗುವ ರೂ.17.98 ಕೋಟಿಗಳು ಮತ್ತು ಲೋಕೋಪಯೋಗಿ ಇಲಾಖೆಯಿಂದ ರೂ.36.27 ಕೋಟಿಗಳು) ಮೊತ್ತವನ್ನು ರಾಜ್ಯ ಸರ್ಕಾರದ ವತಿಯಿಂದ ಭರಿಸಲು” ಸಚಿವ ಸಂಪುಟ ಅನುಮೋದಿಸಿದೆ.
ಸಮಾಜ ಕಲ್ಯಾಣ ಇಲಾಖೆಯ ಎಲ್ಲಾ ಕಚೇರಿಗಳಿಗೆ ಒಂದೇ ಸೂರಿನಡಿ ಮೂಲಸೌಕರ್ಯ
ಬೆಂಗಳೂರು ನಗರದ ಸಂಪಂಗಿರಾಮ ನಗರದಲ್ಲಿ ಸಮಾಜ ಕಲ್ಯಾಣ ಭವನ ವನ್ನು ಪರಿಷ್ಕøತ ಅಂದಾಜು ರೂ.40.50 ಕೋಟಿಗಳ ವೆಚ್ಚದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನಮೋದನೆ ನೀಡಲು ಹಾಗೂ ಹಾಲಿ ಇರುವ ಗುತ್ತಿಗೆದಾರರಾದ ಮೆ: ಎನ್. ಬಿ. ಕನ್‍ಸ್ಟ್ರಕ್ಸನ್ಸ್ ರವರಿಗೆ ಪರಿಷ್ಕøತ ಅಂದಾಜು ಮೊತ್ತಕ್ಕೆ ಪರಿಷ್ಕøತ ಕಾರ್ಯಾದೇಶವನ್ನು ನೀಡಲು ಸಚಿವ ಸಂಪುಟ ಅನುಮೋದಿಸಿದೆ.
ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ.
ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆ/ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳೂ ಮತ್ತು KREIS ವಸತಿ ಶಾಲೆ/ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾಹೆಯಾನ ರೂ.100/-ಗಳಲ್ಲಿ ಶೇ.25%ರಷ್ಟು ವೆಚ್ಚದಲ್ಲಿ ಶೇಂಗಾ ಚಿಕ್ಕಿ ಮತ್ತು ಇನ್ನುಳಿದ ಶೇ.75% ರಷ್ಟರಲ್ಲಿ ಪೌಷ್ಟಿಕಾಂಶದ ಪುಡಿಯನ್ನು ರೂ.32.95 ಕೋಟಿಗಳ ವೆಚ್ಚದಲ್ಲಿ ಖರೀದಿಸಿ, ಒದಗಿಸಲು ಸಚಿವ ಸಂಪುಟ ಅನುಮೋದಿಸಿದೆ.
ಬಿಬಿಎಂಪಿ ವ್ಯಾಪ್ತಿಯ ರಸ್ತೆಗಳ ಸುಧಾರಣೆಗೆ ಅಸ್ತು
ಕರ್ನಾಟಕ ಸರ್ಕಾರ (ವ್ಯವಹಾರ ನಿರ್ವಹಣೆ) ನಿಯಮಗಳು, 1977ರ ಮೊದಲನೇ ಅನುಸೂಚಿಯ ಕ್ರಮ ಸಂಖ್ಯೆ: 15ರ ಅನ್ವಯ ಬಿ.ಬಿ.ಎಂ.ಪಿ. ವ್ಯಾಪ್ತಿಯ 389.68 ಕಿ.ಮೀ.ಉದ್ದದ ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ರೂ.694.00 ಕೋಟಿಗಳ ಮೊತ್ತವನ್ನು ಬಿ.ಬಿ.ಎಂ.ಪಿ.ಯ ಆಯವ್ಯಯದಲ್ಲಿ 2024-25ನೇ ಸಾಲಿನಲ್ಲಿ ರೂ.300.00 ಕೋಟಿಗಳನ್ನು ಹಾಗೂ 2025-26ನೇ ಸಾಲಿನಲ್ಲಿ ರೂ.394.00 ಕೋಟಿಗಳನ್ನು ಭರಿಸಿಕೊಳ್ಳುವ ಷರತ್ತಿಗೆ ಒಳಪಟ್ಟು ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿರುವ ಸರ್ಕಾರದ ಆದೇಶ ಸಂಖ್ಯೆ: ನಅಇ 446 ಎಂಎನ್‍ವೈ 2024 (ಇ), ದಿನಾಂಕ: 22-11-2024ಕ್ಕೆ (ಅನುಬಂಧ-2) ಸಚಿವ ಸಂಪುಟದ ಘಟನೋತ್ತರ ಅನುಮೋದನೆ ನೀಡಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವ 1611.49 ಕಿ.ಮೀ ಉದ್ದದ ಮುಖ್ಯ ಮತ್ತು ಉಪ ಮುಖ್ಯ ರಸ್ತೆ ಜಾಲದ ಕೆಲವು ರಸ್ತೆಗಳು ಹಾಳಾಗಿದ್ದು, ವ್ಯಾಪಕ ಸಾರ್ವಜನಿಕ ಟೀಕೆಗೆ ಗುರಿಯಾಗುತ್ತಿದೆ. ತುರ್ತು ಅಭಿವೃದ್ಧಿಯಿಂದ ಸುಗಮ ಸಂಚಾರ ಉಂಟಾಗಿ ವಾಹನ ಸಾಂದ್ರತೆ ಕಡಿಮೆಯಾಗುವ ನಿರೀಕ್ಷೆ ಇದೆ.
ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಯ ಪರಿಷ್ಕøತ ಅಂದಾಜಿಗೆ ಅನುಮೋದನೆ
ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ರೈತರ ಸಹಭಾಗಿತ್ವದ ಶೇ.50:50ರ ಅನುಪಾತದಲ್ಲಿ ಹಾಗರಗಾ ಗ್ರಾಮದ ಸರ್ವೆ ನಂ.213/1, 214/1, 214/2, 214/4, 214/5, 214/6, 215/2, 215/3, 215/4, 215/5, 215/6, 215/7, 216/1, 216/2, 216/3, 217, 218/6, 218/7, 221, 228/1, 228/2ರ ಒಟ್ಟು ವಿಸ್ತೀರ್ಣ 117 ಎಕರೆ-05 ಗುಂಟೆ (ಪೊಟ್ ಖರಾಬ ‘ಅ’ 14 ಗುಂಟೆ ಒಳಗೊಂಡಂತೆ) ಜಮೀನನಲ್ಲಿ ವಸತಿ ಯೋಜನೆಗೆ 2016-17ನೇ ಸಾಲಿನ ದರಪಟ್ಟಿಯಂತೆ ಯೋಜನೆ ವೆಚ್ಚ ರೂ.6376.00 ಲಕ್ಷಗಳ ಅಂದಾಜು ಮೊತ್ತವನ್ನು ಪ್ರಾಧಿಕಾರವು ಪ್ರಸ್ತುತ2023-24ನೇ ಸಾಲಿನ ದರಪಟ್ಟಿಯಂತೆ ಪರಿಷ್ಕøರಿಸಲಾದ ಅಭಿವೃದ್ಧಿ ಯೋಜನಾ ವೆಚ್ಚ ರೂ.9750.00. ಲಕ್ಷಗಳ ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಪರಿಷ್ಕøತ ಯೋಜನಾ ವೆಚ್ಚಕ್ಕೆ ಮಂಜೂರಾತಿ ನೀಡಲು” ಸಚಿವ ಸಂಪುಟ ನಿರ್ಣಯಿಸಿದೆ.
ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ರೈತರ ಸಹಭಾಗಿತ್ವದಲ್ಲಿ 50:50ರ ಅನುಪಾತದಲ್ಲಿ ಕಲಬುರಗಿ ತಾಲ್ಲೂಕಿನ ಹಾಗರಗಾ ಗ್ರಾಮದ ವಿವಿಧ ಸರ್ವೆ ನಂಬರ್ ಗಳಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ವಸತಿ ಯೋಜನೆಯ ರೂ.97.50 ಕೋಟಿಗಳ ಮೊತ್ತದ ಪರಿಷ್ಕøತ ಅಂದಾಜಿಗೆ ಅನುಮೋದನೆಗೆ ಪ್ರಸ್ತಾಪಿಸಲಾಗಿತ್ತು.
ಬಳ್ಳಾರಿಯಲ್ಲಿ ಬಾಣಂತಿ ಸಾವಿನ ಕುರಿತು ಚರ್ಚೆ
ಬಳ್ಳಾರಿ ಬಾಣಂತಿ ಸಾವಿನ ಕುರಿತು ಚರ್ಚೆಯಾಗಿ, ಈ ಕುರಿತು ಮುಖ್ಯಮಂತ್ರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಸಚಿವ ದಿನೇಶ್ ಗುಂಡೂರಾವ್ ಅವರು ವಿವರವಾದ ವರದಿ ಸಲ್ಲಿಸಿದ್ದಾರೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
ಹೆಚ್ಚುವರಿ ವಿಷಯಗಳು
ಔಷಧ ನಿಯಂತ್ರಣ ಮತ್ತು ಆಹಾರ ಸುರಕ್ಷತೆ ಇಲಾಖೆ ವಿಲೀನ
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆಗಳನ್ನು ವಿಲೀನಗೊಳಿಸಿ ಆಯುಕ್ತರು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (FDA) ಎಂದು ಪದನಾಮೀಕರಿಸಲು ಹಾಗೂ ಆಯುಕ್ತರು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಇವರನ್ನು ಆಯುಕ್ತರು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (FDA) ಇಲಾಖೆಯ ಮುಖ್ಯಸ್ಥರನ್ನಾಗಿ ಸಚಿವ ಸಂಪುಟ ಒಪ್ಪಿದೆ.
ಆಯುಕ್ತರು, ಅಹಾರ ಸುರಕ್ಷತೆ ಮತ್ತು ಔಷಧ ಆಡಳಿತ (FDA) ಇವರ ಆಡಳಿತಾತ್ಮಕ ನಿಯಂತ್ರಣದಡಿಯಲ್ಲಿ ಎರಡು ಇಲಾಖೆಗಳ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕಾರ್ಯನಿರ್ವಹಿಸಲು ಸಚಿವ ಸಂಪುಟ ಅನುಮೋದಿಸಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ರೂ.47.00 ಕೋಟಿ.
ರಾಜ್ಯದ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಅಪರೂಪದ ಮತ್ತು ಹೆಚ್ಚಿನ ವೆಚ್ಚದ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‍ನ SCSP/TSP ಅಡಿಯಲ್ಲಿ ಪ್ರಸ್ತುತ ಲಭ್ಯವಿರುವ ರೂ.47.00 ಕೋಟಿಗಳ ಕಾರ್ಪಸ್‍ಫಂಡ್‍ನ್ನು ಕಾರ್ಪಸ್ ನಿಧಿಯನ್ನು ಸ್ಥಾಪಿಸಿ 33 ವಿರಳ ಹಾಗೂ ದುಬಾರಿ ವೆಚ್ಚದ ಕಾಯಿಲೆಗಳ ಚಿಕಿತ್ಸೆಗಾಗಿ ಬಳಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.
*Karnataka (Mineral Rights and Mineral Bearing Land) Tax Bill, 2024 ಅನ್ನು ಅನುಬಂಧದಲ್ಲಿ ಲಗತ್ತಿಸಿರುವಂತೆ ವಿಧಾನ ಮಂಡಲದಲ್ಲಿ ಮಂಡಿಸಲು; ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ.
ಪ್ರಸ್ತಾಪಿತ ಕಾಯ್ದೆಯ ಖನಿಜ ಹಕ್ಕುಗಳ ತೆರಿಗೆ ASP ನ ಶೇ.60% ರಷ್ಟು ಪರಿಗಣಿಸಿದರೆ ರಾಜ್ಯವು ಪ್ರತಿವರ್ಷ ಸುಮಾರು ರೂ.4,207.95 ಕೋಟಿ ಹೆಚ್ಚುವರಿ ಆದಾಯವನ್ನು ಮತ್ತು ಖನಿಜವಿರುವ ಭೂಮಿಗಳ ಮೇಲಿನ ತೆರಿಗೆ ಪ್ರಕಾರ ಪ್ರತಿ ವರ್ಷ ಸುಮಾರು ರೂ.505.90 ಕೋಟಿ ಹೆಚ್ಚುವರಿ ಆದಾಯವನ್ನು ನಿರೀಕ್ಷಿಸಿದೆ.
ಗಣಿ ಗುತ್ತಿಗೆ ಮಂಜೂರಾದ ವಿಧಾನ ಮತ್ತು ಪಾವತಿಸುವ ರಾಜಧನವನ್ನು ಆಧರಿಸಿ ಗಣಿ ಗುತ್ತಿಗೆಗಳ ವರ್ಗಕ್ಕನುಸಾರವಾಗಿ ವಿವಿಧ ತೆರಿಗೆ ದರ ಪ್ರಸ್ತಾಪಿಸಿ ಆಯಾ ವರ್ಗಗಳಲ್ಲಿ ಏಕರೀತಿಯ ತೆರಿಗೆಯನ್ನು ವಿಧಿಸಲು ಪ್ರಸ್ತಾಪಿಸಲಾಗಿದೆ.
ವಸತಿ ಸಮುಚ್ಛಯಕ್ಕೆ ಅನುಮೋದನೆ.
ಬೆಂಗಳೂರು ನಗರ ಜಿಲ್ಲೆ, ಬಿದರಹಳ್ಳಿ ಹೋಬಳಿ, ಹುಸ್ಕೂರು ಗ್ರಾಮದಲ್ಲಿನ ಕರ್ನಾಟಕ ಗೃಹ ಮಂಡಳಿ ಬಡಾವಣೆಯ ಪ್ಲಾಟ್ ಸಂಖ್ಯೆ: 1 ರ 2.06 ಎಕರೆ ವಿಸ್ತೀರ್ಣದಲ್ಲಿ ರೂ.64.78 ಕೋಟಿಗಳ ಯೋಜನಾ ವೆಚ್ಚದಲ್ಲಿ ಖಾಸಗಿ ಸಹಭಾಗಿತ್ವ ಯೋಜನೆಯಡಿ (ಜೆ.ವಿ) ಕೆ.ಟಿ.ಪಿ.ಪಿ ಕಾಯ್ದೆಯ ಪ್ರಕಾರ ಬಹುಮಹಡಿ ವಸತಿ ಸಮುಚ್ಛಯ ಯೋಜನೆಯನ್ನು ಕೈಗೊಳ್ಳಲು; ಸಚಿವ ಸಂಪುಟ ಅನುಮೋದನೆ ನೀಡಿದೆ.
ನೇತ್ರಾವತಿ ನದಿಗೆ ಸೇತುವೆ ನಿರ್ಮಾಣ ಕಾಮಗಾರಿಗೆ ಅನುಮೋದನೆ
ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಸಜಪನಡು ಮತ್ತು ತುಂಬೆ ಗ್ರಾಮದ ಮಧ್ಯೆ ನೇತ್ರಾವತಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಗೆ ರೂ.60.00 ಕೋಟಿ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.
ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಮಂಗಳೂರು-ಚೆರ್ವತ್ತೂರು – ಕರಾವಳಿ ಜಿಲ್ಲಾ ಮುಖ್ಯ ರಸ್ತೆಗೆ (ಕೋಟೆಪುರದಿಂದ- ಬೋಳಾರಗೆ) ನೇತ್ರಾವತಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಗೆ ರೂ.200.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿದೆ.…
[8:49 pm, 6/12/2024] +91 94481 42741: 👇ಬಳ್ಳಾರಿ ಜಿಲ್ಲೆ ಸಂಡೂರು ವಿಧಾನಸಭಾ ಕ್ಷೇತ್ರದ ತೋರಗಲ್ಲು ರೈಲ್ವೇ ಸ್ಟೇಷನ್ ಗೆ ಸೇರಿದ ಸರ್ವೆ ನಂಬರ್ 321(ಎ2) (ಎ3) ನ ಎಂಟು ಎಕರೆ ಜಾಗದ ವಿಚಾರದಲ್ಲಿ ಕಾನೂನು ಹೋರಾಟ ಮುಂದುವರೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಸಚಿವ ಸಂತೋಷ್ ಲಾಡ್, ಸಂಸದ ಈ.ತುಕಾರಾಮ್, ಸಚಿವರಾದ ಜಮೀರ್ ಅಹಮದ್ ನೇತೃತ್ವದ ನಿಯೋಗದ ಈ ಕುರಿತು ಮುಖ್ಯಮಂತ್ರಿಗಳ ಜೊತೆ ಸುದೀರ್ಘ ಚರ್ಚೆ ನಡೆಸಿ ಪ್ರಕರಣದ ವಿವರಗಳನ್ನು ದಾಖಲೆ ಸಮೇತ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದರು.
ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅಲ್ಲಿ ನೆಲೆಸಿರುವ 800 ಕುಟುಂಬಗಳು, 2000 ಮಂದಿಗೆ ಯಾವುದೇ ತೊಂದರೆ ಆಗಬಾರದು. ನ್ಯಾಯಬದ್ದವಾದ ಕಾನೂನು ಹೋರಾಟ ಮುಂದುವರೆಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು.
ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ, ಜಿಲ್ಲಾ ವರಿಷ್ಠಾಧಿಕಾರಿ ಶೋಭಾ ರಾಣಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಮುಖ್ಯಮಂತ್ರಿಗಳು ಕೇಳಿದ ದಾಖಲೆ ಮತ್ತು ವಿವರಗಳನ್ನು ಒದಗಿಸಿದರು.