ದೆಹಲಿ ಸರ್ಕಾರದ ಮೇಲಿನ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ವಿರುದ್ಧ ದನಿಗೂಡಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ರಾಜ್ಯ ಎಎಪಿ ಮುಖಂಡರು ಮನವಿ ಮಾಡಿದರು. ಜುಲೈ 26 ರ ಸಂಜೆ ದೇವೇಗೌಡರ ಮನೆಗೆ ತೆರಳಿದ ಮುಖ್ಯಮಂತ್ರಿ ಚಂದ್ರು ನೇತೃತ್ವದ ಆಮ್ ಆದ್ಮಿ ಪಕ್ಷದ ಮುಖಂಡರು ದೆಹಲಿ ಸರ್ಕಾರದ ಪರ ನಿಲ್ಲಲು ಕೋರಿಕೊಂಡರು.
ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ರವರನ್ನು ಅವರ ಮನೆಯಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸೌಹಾರ್ದ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದರು. ನಂತರ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವ, ಸಂವಿಧಾನವನ್ನು ಹಾಗೂ ದೇಶದ ಒಕ್ಕೂಟ ವ್ಯವಸ್ಥೆಯನ್ನು ಉಳಿಸಲು ನೀವು ದನಿಗೂಡಿಸಬೇಕೆಂದು ಮನವಿ ಮಾಡಿದರು.
ಹಾಗೆಯೇ ದೆಹಲಿ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯ ಸಭೆಯಲ್ಲಿ ವಿರೋಧ ವ್ಯಕ್ತಪಡಿಸಬೇಕೆಂದು ಮುಖ್ಯಮಂತ್ರಿ ಚಂದ್ರು ಮನವಿ ಮಾಡಿಕೊಂಡರು.
ಇದೇ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ. ನಾಗಣ್ಣ, ಸಂವಹನ ಉಸ್ತುವಾರಿ ಬ್ರಿಜೇಶ್ ಕಾಳಪ್ಪ, ಜಗದೀಶ್ ವಿ ಸದಂ, ದರ್ಶನ್ ಜೈನ್, ಬಸವರಾಜ್ ಸೇರಿದಂತೆ ಪಕ್ಷದ ಅನೇಕ ಮುಖಂಡರುಗಳು ಭಾಗವಹಿಸಿದ್ದರು.