ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ತೀವ್ರ ಉಸಿರಾಟದ ತೊಂದರೆ ಕಂಡುಬಂದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಚೆನ್ನಮ್ಮ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಅವರ ಆರೋಗ್ಯ ವಿಚಾರಿಸಲು ಕುಟುಂಬ ಸದ್ಯಸ್ಯರು ಬುಧವಾರ ರಾತ್ರಿಯೇ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಕೇಂದ್ರ ಸಚಿವರಾಗಿರುವ ಹೆಚ್‌ಡಿ ಕುಮಾರಸ್ವಾಮಿ ಅವರು ನಿನ್ನೆ ಚನ್ನಪಟ್ಟಣ ಟಿಕೆಟ್ ವಿಚಾರವಾಗಿ ಸಭೆ ನಡೆಸಬೇಕಿತ್ತು. ಆದರೆ ಚೆನ್ನಮ್ಮ ಅವರ ಅನಾರೋಗ್ಯ ಹಿನ್ನೆಲೆ ಸಭೆ ರದ್ದುಗೊಳಿಸಿದ್ದಾರೆ.

ಚನ್ನಪಟ್ಟಣ ಉಪ ಚುನಾವಣೆ ವಿಚಾರವಾಗಿ ನಿನ್ನೆ ಬಿಜೆಪಿ ಜೆಡಿಎಸ್ ಸಮನ್ವಯ ಸಮಿತಿ ಸಭೆ ಕರೆದಿತ್ತು. ಬೆಂಗಳೂರಿನ ಖಾಸಗಿ ಹೋಟೆಲಲ್ಲಿ ಈ ಒಂದು ಸಭೆ ನಡೆಯಬೇಕಿತ್ತು. ಆದರೆ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ತಕ್ಷಣವೇ ಸಭೆ ರದ್ದು ಮಾಡಲಾಗಿದೆ.

ಈ ಎಲ್ಲಾ ಬೆಳವಣಿಗೆ ಹಿನ್ನೆಲೆಯಲ್ಲಿ ಗುರುವಾರ ಎನ್‌ಡಿಎ ಹೈಕಮಾಂಡ್‌ನಿಂದಲೇ ಅಭ್ಯರ್ಥಿ ಘೋಷಣೆ ಮಾಡಿಸುತ್ತೇನೆ ಎಂದು ಹೆಚ್‌ಡಿ ಕುಮಾರಸ್ವಾಮಿಯವರು ತಿಳಿಸಿ, ಸಭೆ ರದ್ದು ಮಾಡಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಲು ತೆರಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು